ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಯಡಿಯೂರಪ್ಪ ಅವರು ರಾಜಿನಾಮೆ ನೀಡುವುದು ಒಳ್ಳೆಯದು ಎಂದು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ನಳಿನ್, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮನಗಂಡಿದ್ದಾರೆ. ಅವರು ಭಯದಲ್ಲಿ ಅತಂತ್ರ ಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಲವ್ ಜಿಹಾದ್ ಬಗ್ಗೆ ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು. ಹಾಗೂ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ಅವರು ತಿಳಿಸಿದರು.