ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ, ಅಭ್ಯರ್ಥಿಗಳ ಚುನಾವಣೆಗೆ ನಿಲ್ಲಿಸುವ ಬಗ್ಗೆ ಚರ್ಚೆ ನಡೆಸುತ್ತಾರೆ. ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿ ಹಾಕಿದರೇ, ಕಾಂಗ್ರೆಸ್ ಸೋಲಿಸುವ ಸಲುವಾಗಿಯೇ ಅಭ್ಯರ್ಥಿ ಹಾಕಿದ್ದಾರೆ ಎಂದು ಟೀಕಿಸುತ್ತಾರೆ. ಈಗಾಗಿಯೇ ನನ್ನ ಟ್ವೀಟ್ ನಲ್ಲಿ ಅವರ ವಿಷಯ ಪ್ರಸ್ತಾಪ ಮಾಡಿದ್ದೇನೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ ನಾನು ನಿಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಜಿಲ್ಲೆಯ ಭದ್ರಾವತಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ನನ್ನ ಟ್ವೀಟ್‍ನಲ್ಲಿ ಸಿದ್ದರಾಮಯ್ಯ ಅವರ ಹಿಂದಿನ ಹಿನ್ನೆಲೆಯ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಅವರು ಅಲ್ಪಸಂಖ್ಯಾತರಿಗೆ ಯಾವ ರೀತಿ ಗೌರವ ಕೊಟ್ಟಿದ್ದಾರೆ. ಯಾವ ರೀತಿ ನಡೆದುಕೊಂಡಿದ್ದಾರೆ ಎಂಬ ಬಗ್ಗೆ ಐದಾರು ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಅದಕ್ಕೆ ಅವರು ಉತ್ತರ ಕೊಡಲಿ. ಆದರೆ ಅವರು ಈ ವಿಷಯವನ್ನು ಇಲ್ಲಿಗೆ ನಿಲ್ಲಿಸುತ್ತೇನೆ ಅಂದರೆ ನಾನು ಕೂಡ ನಿಲ್ಲಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್
ನನ್ನ ಟ್ವೀಟ್ ನಲ್ಲಿ ಕೆಲವು ಘಟನೆಗಳನ್ನು ಅವರಿಗೆ ನೆನಪು ಮಾಡಿದ್ದೇನೆ ಅಷ್ಟೇ. ಅವರೇ ಶಾಸಕಾಂಗ ಪಕ್ಷದ ನಾಯಕರಾಗಿದ್ದಾಗ ನಡೆದ ಘಟನೆಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೇನೆ. ಕೆಲವರು ನನ್ನನ್ನು ಪದೇ ಪದೇ ಕೆದಕುತ್ತಾರೆ. ಅಂತಹವರಿಗೆ ಪ್ರಶ್ನೆ ಕೇಳಿದ್ದೇನೆ. ಪದೇ ಪದೆ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡುವ ಹಿನ್ನೆಲೆಯಲ್ಲಿ ಅವರ ವಿಷಯ ಪ್ರಸ್ತಾಪ ಮಾಡಿದ್ದೇನೆ. ಪದೇ ಪದೇ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡುವ ಹಿನ್ನೆಲೆಯಲ್ಲಿ ಅವರ ವಿಷಯ ಪ್ರಸ್ತಾಪ ಮಾಡಿದ್ದೇನೆ. ಆದರೆ ಅದನ್ನು ಹೊರತುಪಡಿಸಿ ದ್ವೇಷಕ್ಕೋ, ಅಸೂಯೆಗೋ, ಮತ್ತೊಂದಕ್ಕೋ ಹೇಳಿರುವ ಪದಗಳಲ್ಲ ಎಂದು ಎಚ್‍ಡಿಕೆ ಹೇಳಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ಡೀಲರ್: ಜಮೀರ್ ವಾಗ್ದಾಳಿ
ನಾನು ಇರುವ ಬಗ್ಗೆ ತೋರಿಸಲು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ. ನನ್ನ ಇರುವಿಕೆ ಈಗಾಗಲೇ ನಾಡಿನ ಮೂಲೆ ಮೂಲೆಯ ಜನರಿಗೆ ಪರಿಚಯ ಇದೆ. ಈ ರೀತಿ ಹೇಳಿಕೆ ಕೊಟ್ಟು ನನ್ನ ಇರುವಿಕೆ ತೋರಿಸಿಕೊಳ್ಳಬೇಕಾಗಿಲ್ಲ. ನಾನೂ ಈಗಾಗಲೆ ಜನರೊಂದಿಗೆ ಇರುವವನು. ನಾನೇನು ಜನತೆಯಿಂದ ದೂರ ಇರುವವನು ಅಲ್ಲ ಎಂದು ನುಡಿದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ