ಮೈಸೂರು: ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿರುವ ಅವರು, ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯನವರಿಗೆ ಗೊತ್ತಾಗುತ್ತಿದೆ. ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್‍ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರಬಹುದು. ಇದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು. ಆದರೆ ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಿದ್ದೇವೆ. ಶಿರಾ ವಿಚಾರ 70 ವರ್ಷದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈಗ ಸಂಘಟಿತರಾಗಿ ಹೋರಾಟ ಮಾಡಿದಕ್ಕೆ ಗೆಲುವು ಸಿಗುತ್ತಿದೆ. ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತವೆ. ಉಪಚುನಾವಣೆಯಲ್ಲಿ ಹಣ, ಅಧಿಕಾರ ದುರುಪಯೋಗವಾಗುತ್ತದೆ ಎಂದು ಆರೋಪಿಸಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉಪಚುನಾವಣೆಯಲ್ಲಿ ಮಾಡಿದ್ದೇನು? ನಂಜನಗೂಡು, ಚಾಮರಾಜನಗರ ಉಪಚುನಾವಣೆ ಹೇಗೆ ಗೆದ್ದರು ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಉಪ ಚುನಾವಣೆಯನ್ನು ಹೇಗೆ ಮಾಡಬೇಕು ಎಂದು ಮೇಲ್ಪಂಕ್ತಿ ಹಾಕಿಕೊಟ್ಟವರೇ ಕಾಂಗ್ರೆಸ್‍ನವರು. ಉಪಚುನಾವಣೆಯಲ್ಲಿ ಎಲ್ಲ ಬಲಗಳು ಬಳಕೆಯಾಗುವುದು ಸಹಜ. ಕಾಂಗ್ರೆಸ್ ಸೋತಾಗ ಅವರಿಗೆ ಇವಿಎಂ ನೆನಪಾಗುತ್ತದೆ. ಅವರು ಗೆದ್ದ ಕಡೆ ಈ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಇವಿಎಂ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಅಮೆರಿಕಾ ಚುನಾವಣೆಯಲ್ಲೂ ಇದು ಸಾಬೀತಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ.ಶಿವಕುಮಾರ್ ಗೆ ಯಾವುದೇ ಸ್ಥಾನ ಸಿಗಬಾರದು. ಇದು ಸಿದ್ದರಾಮಯ್ಯನವರ ಉದ್ದೇಶ. ಇದೇ ಕಾರಣಕ್ಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಕಾಂಗ್ರೆಸ್ ಪರಂಪರೆ. ಇದು ಸಿದ್ದರಾಮಯ್ಯನವರಿಗೆ ಗೊತ್ತಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ಇದನ್ನು ತಪ್ಪಿಸಲು ಡಿ.ಕೆ.ಶಿವಕುಮಾರ್ ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕು. ಆದರೆ ಪರಮೇಶ್ವರ್ ಅವರನ್ನು ಸೋಲಿಸಿದಂತೆ ಡಿಕೆಶಿ ಸೋಲಿಸಲು ಸಾಧ್ಯವಿಲ್ಲ. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಹೀಗಾಗಿ ಪಕ್ಷದ ಹಿನ್ನೆಡೆಗೆ ಅವರೇ ಕಾರಣರಾಗುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.