ನವದೆಹಲಿ: ದೇಶದಲ್ಲಿ ಮುಂದೆ ನಡೆಯಲಿರುವ ಸಿಬಿಎಸ್‍ಇ ಪರೀಕ್ಷೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಸಚಿವರಾದ ರಮೇಶ್ ಪೋಕ್ರಿಯಲ್ ಮತ್ತು ಶಿಕ್ಷಣ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
Advertisement
ದೇಶದಲ್ಲಿ ಕೊರೊನಾ 2ನೇ ಅಲೆ ಹೆಚ್ಚಾಗುತ್ತಿದ್ದಂತೆ ಮುಂದೆ ನಡೆಯಲಿರುವ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗ ಸಿಬಿಎಸ್‍ಇ ಪರೀಕ್ಷೆ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
Advertisement
Advertisement
ಕೆಲದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸಿಬಿಎಸ್‍ಸಿ ಪರೀಕ್ಷೆಗಳನ್ನು ರದ್ದು ಮಾಡಬೇಕಾಗಿ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ರಾಜಕಾರಣಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಕುರಿತು ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.
Advertisement
ಸಿಬಿಎಸ್‍ಇ ಪರೀಕ್ಷೆಗಳು ಮೇ 4 ರಿಂದ ಪ್ರಾರಂಭವಾಗಿ 10ನೇ ತರಗತಿಯವರಿಗೆ ಜೂನ್ 7 ರಂದು ಮತ್ತು 12ನೇ ತರಗತಿಯವರಿಗೆ ಜೂನ್ 12 ರಂದು ಮುಕ್ತಾಯವಾಗುವಂತೆ ಈಗಾಗಲೇ ನಿಗದಿಯಾಗಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದಾಗಿ ಈ ಬಾರಿಯ ಪರೀಕ್ಷೆಗಳನ್ನು ಆನ್‍ಲೈನ್ ಮೂಲಕ ನಡೆಸಲು ಸಭೆಯಲ್ಲಿ ಚಿಂತನೆ ಮಾಡಲಾಗಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.