ನವದೆಹಲಿ: ಕೇಂದ್ರ ತನಿಖಾ ದಳ(ಸಿಬಿಐ)ದ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೇಮಕ ಮಾಡುವಂತೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಮಂಗಳವಾರ ಆದೇಶ ಹೊರಡಿಸಿದೆ.
Advertisement
ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರವಧಿ ಮುಂದಿನ ಎರಡು ವರ್ಷಗಳವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ ಅವರ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಅಂತಿಮಗೊಳಿಸಿತ್ತು.
Advertisement
Advertisement
ಜೈಸ್ವಾಲ್ ಅವರು 1985ರ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಮಹಾನಿರ್ದೇಶಕರಾಗಿದ್ದಾರೆ. ಈ ಹಿಂದೆ ಮುಂಬೈ ಪೊಲೀಸ್ ಕಮಿಷನರ್ ಆಗಿ, ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಇದಲ್ಲದೆ ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲೂ ಕೂಡ ಕಾರ್ಯನಿರ್ವಹಿಸಿದ್ದು, ಇದೀಗ ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
Advertisement