ಬೆಳಗಾವಿ: ಸಿಬಿಐ ತನಿಖೆಯನ್ನು ಎದುರಿಸುವ ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಸಂಬಂಧ ಗೋಕಾಕ್‍ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಸತೀಶ್, ಇದು ಪೂರ್ವನಿಯೋಜಿತ, ಇದೇನು ಹೊಸದೇನಲ್ಲ. ನಮಗೆ ಡಿಸ್ಟರ್ಬ್ ಮಾಡಲಿಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಆರೋಪ ಮಾಡಿದ್ದೇವೆ. ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ತೊಂದರೆ ಕೊಡುತ್ತಿದ್ದಾರೆ. ಆದರೆ ಪಕ್ಷ ದೊಡ್ಡದು, ಒಂದೇ ವ್ಯಕ್ತಿಯಿಂದ ಏನು ಪಕ್ಷ ಇರಲ್ಲ. ಇಡೀ ಪಕ್ಷವೇ ದೊಡ್ಡದಾಗಿದೆ, ಅವರನ್ನು ಯಾರೂ ಹೆದರಿಸಕ್ಕಾಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?
ಇದನ್ನು ಫೇಸ್ ಮಾಡುವ ಸಾಮರ್ಥ್ಯ ನಮ್ಮ ಅಧ್ಯಕ್ಷರಿಗಿದೆ. ನಮ್ಮ ಅಧ್ಯಕ್ಷರು ಇದನ್ನು ಫೇಸ್ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ
ಇತ್ತ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ ಎಂದು ಖಂಡಿಸಿದ್ದರು. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಗರಂ ಆಗಿದ್ದರು.