ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಬಿಐ ವಿಚಾರಣೆಗೆ ಹಾಜರಾಗಲಿದ್ದಾರೆ.
ನವೆಂಬರ್ 19ರಂದು ನೋಟಿಸ್ ನೀಡಿದ್ದ ಸಿಬಿಐ, ನವೆಂಬರ್ 23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಪೂರ್ವ ನಿಗದಿ ಕಾರ್ಯಕ್ರಮ ಹಿನ್ನೆಲೆ ಡಿ.ಕೆ. ಶಿವಕುಮಾರ್ ಬುಧವಾರ ವಿಚಾರಣೆಗೆ ಹಾಜರಾಗೋದಾಗಿ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಇಂದು ಮಧ್ಯಾಹ್ನ 2 ಗಂಟೆಯ ನಂತರ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.
Advertisement
Advertisement
ಅಕ್ಟೋಬರ್ 5 ರಂದು ಡಿಕೆ ಶಿವಕುಮಾರ್ ಮನೆ ಸೇರಿದಂತೆ 14 ಕಡೆ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 57 ಲಕ್ಷ ನಗದು, ಆಸ್ತಿ ದಾಖಲೆಗಳು, ಬ್ಯಾಂಕ್ ದಾಖಲೆ, ಹಾರ್ಡ್ ಡಿಸ್ಕ್ ನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.