– ಲಾಕ್‍ಡೌನ್ ನಡುವೆ ಸೋಂಕಿತರು ನಾಪತ್ತೆ
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ನೂರಾರು ಜನ ಸಾವನ್ನಪ್ಪುತ್ತಿದ್ದಾರೆ. ಇದೆಲ್ಲದರ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು, ಇಂದು ಸಹ 6,029 ಜನ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜನರಲ್ಲಿ ಮತ್ತೆ ಆತಂಕ ಹೆಚ್ಚಿದೆ.
ಕೊರೊನಾ ಕರ್ಫ್ಯೂ ಇದೀಗ ಮತ್ತೆ ಲಾಕ್‍ಡೌನ್ ಮಡಿರುವ ಮಧ್ಯೆ ನಗರದಲ್ಲಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ ನಾಪತ್ತೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಇದೀಗ ಮತ್ತೆ 6,029 ಜನ ಕಾಣೆಯಾಗಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ಮನೆ ಮಾಡಿದೆ.
ದಿನೇ ದಿನೇ ನಾಪತ್ತೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೊಬೈಲ್ ನಂಬರ್ ಹಾಗೂ ವಿಳಾಸ ತಪ್ಪು ಕೊಡುತ್ತಿದ್ದಾರೆ. ಇನ್ನೂ ಹಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಪಾಸಿಟಿವ್ ಆದವರನ್ನು ಪತ್ತೆ ಮಾಡು ಕಷ್ಟವಾಗಿದೆ.
ಶನಿವಾರ ಬೆಂಗಳೂರಿನಲ್ಲಿ 20,892 ಕೇಸ್ ದಾಖಲಾಗಿವೆ. ಅದರಲ್ಲಿ 6,029 ಜನರನ್ನು ಐಸೋಲೇಟ್ ಮಾಡಲು ಸಾಧ್ಯವಾಗಿಲ್ಲ. ಅಲ್ಲದೆ 6,029 ಜನರ ವಿಳಾಸ ತಪ್ಪಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ಜೊತೆಗೆ ಈ ಹಿಂದೆ ಸಹ ನಾಪತ್ತೆಯಾದ 10,835 ಜನರನ್ನು ಇನ್ನೂ ಪತ್ತೆ ಮಾಡಬೇಕಿದೆ. ಬೆಂಗಳೂರು ಕೊರೊನಾ ಹಬ್ ಆಗೋಕೆ ಪ್ರಮುಖ ಕಾರಣ ಸೋಂಕಿತರ ನಾಪತ್ತೆಯಾಗಿದ್ದು, ನಿನ್ನೆ ಸಹ 6,055 ಜನ ನಾಪತ್ತೆ ಆಗಿದ್ದರು. ಇಂದು ಮತ್ತೆ 6,029 ಜನರ ವಿಳಾಸ ಸಿಗುತ್ತಿಲ್ಲ.