– 870 ಪೊಲೀಸರು ಕ್ವಾರಂಟೈನ್
– ಕೆಲಸ ಮಾಡಲು ಕೊರೊನಾ ವಾರಿಯರ್ಸ್ ಹಿಂದೇಟು
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಪೊಲೀಸ್ ಇಲಾಖೆ ತತ್ತರಿಸಿ ಹೋಗಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಈ ಹಿನ್ನೆಲೆ ಪೊಲೀಸರು ತೀವ್ರ ಆತಂಕಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ ಹೆಚ್ಚು ವ್ಯಾಪಿಸುತ್ತಿದ್ದು, ಈಗಾಗಲೇ ಬೆಂಗಳೂರಿನ ಏಳು ಪೊಲೀಸ್ ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಕಲಾಸಿಪಾಳ್ಯ, ಹಲಸೂರು ಗೇಟ್, ಚಾಮರಾಜಪೇಟೆ, ತಿಲಕ್ ನಗರ, ಕೆಂಗೇರಿ ಹಾಗೂ ಎಡಿಜಿಪಿ ಕಾನೂನು ಸುವ್ಯವಸ್ಥೆ ಕಚೇರಿಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಹೀಗಾಗಿ ಪೊಲೀಸರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿಯವರೆಗೆ 92 ಪೊಲೀಸರಿಗೆ ಕೊರೊನಾ ಮಹಾಮಾರಿ ಆವರಿಸಿದ್ದು, 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಹಿಂಜರಿಕೆ, ಭಯದಿಂದಲೇ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅಲ್ಲದೆ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.