– ಶ್ರೀಮಂತರ ಮಕ್ಕಳೇ ಇವರ ಟಾರ್ಗೆಟ್
ಬೆಳಗಾವಿ: ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕುಂದಾನಗರಿಯಲ್ಲಿ ನಡೆದಿದೆ.
ಗ್ಯಾಂಗ್‍ವೊಂದು ಮಸಾಜ್ ಮತ್ತು ಸ್ಪಾ ಸೆಂಟರ್ ನಡೆಸುವುದಾಗಿ ಅನುಮತಿ ಪಡೆದು ಅನೈತಿಕ ಚಟುವಟಿಕೆ ನಡೆಸುತ್ತಿರುವುದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿದ್ದ ನ್ಯೂ ಗೆಟ್ ವೇ ಯುನಿಸೆಕ್ಸ್ ಸ್ಪಾ ಹೆಸರಿನಲ್ಲಿರುವ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕೇದಾರಿ ಶಿಂಧೆ, ಪ್ರಕಾಶ್ ಯಳ್ಳೂರ್ಕರ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಳಿಕ ತನಿಖೆ ವೇಳೆ ಈ ಗ್ಯಾಂಗ್‍ನ ಪ್ರಮುಖ ಟಾರ್ಗೆಟ್ ಶ್ರೀಮಂತ ಯುವಕರು ಎಂದು ತಿಳಿದು ಬಂದಿದೆ. ಆನ್‍ಲೈನ್ ಮೂಲಕ ಬಣ್ಣ ಬಣ್ಣದ ಹುಡುಗಿಯರ ಫೋಟೋ ತೋರಿಸುವ ಮೂಲಕ ಶ್ರೀಮಂತ ಯುವಕರನ್ನು ಬಲೆಗೆ ಹಾಕಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದರು ಎಂಬ ಅಸಲಿ ಸತ್ಯ ಬಯಲಾಗಿದೆ.
ಇನ್ನೂ ಘಟನೆಯಲ್ಲಿ ಪೊಲೀಸರು ಮೂವರು ಯುವತಿಯರನ್ನು ರಕ್ಷಣೆ ಮಾಡಿ ಅವರನ್ನು ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಇದೀಗ ಪ್ರಕರಣ ಕುರಿತಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.