ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.
Advertisement
Advertisement
ಇತ್ತ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ನಾಲ್ಕು ದಿನದ ಹಿಂದೆ ಸಂಜನಾ ಅರ್ಜಿ ಸಲ್ಲಿಕೆ ಮಾಡಿದ್ದು, ವಿಚಾರಣೆ ದಿನಾಂಕ ನಿಗದಿಯಾಗಿಲ್ಲ.