ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಮಾಡಿಕೊಂಡಿದ್ದ ಮನವಿಯನ್ನ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಸ್ಪಂದಿಸಿದೆ.
ಸುಶಾಂತ್ ಪ್ರಕರಣವನ್ನು ತನಿಖೆಗೆ ವರ್ಗಾಯಿಸಬೇಕೆಂಬ ಅರ್ಜಿಯನ್ನ ಇಂದು ಸುಪ್ರಿಂಕೋರ್ಟ್ ಎತ್ತಿಕೊಂಡಿತ್ತು. ಈ ವೇಳೆ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಉಪಸ್ಥಿತರಿದ್ದರು. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಒಪ್ಪಿಗೆ ಸೂಚಿಸಿದೆ. ಈಗಾಗಲೇ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಈ ಅರ್ಜಿಯ ವಿಚಾರಣೆ ನಡೆಸುವ ಅಗತ್ಯವಿಲ್ಲ. ಕಾರಣ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದೆ. ಕೆಲವರು ಪ್ರಕರಣದ ತನಿಖೆ ಬಿಹಾರದ ಪೊಲೀಸರು ನಡೆಸಬೇಕಂದು ಹೇಳ್ತಾರೆ. ಮತ್ತೆ ಕೆಲವರು ಮುಂಬೈ ಪೊಲೀಸರಿಂದ ತನಿಖೆ ನಡೆಸಲು ಎನ್ನುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಉದ್ದೇಶದಿಂದ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದೆ ಎಂದಿ ನ್ಯಾಯಾಲಯಕ್ಕೆ ತಿಳಿಸಿದರು.