ಭೋಪಾಲ್: ಸೂರತ್‌ನಿಂದ ಕೋಲ್ಕತ್ತಾಗೆ ಹೊರಟ್ಟಿದ್ದ 172 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂದು ಬೆಳಗ್ಗೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.
ತಾಂತ್ರಿಕ ಕಾರಣಗಳಿಂದಾಗಿ ಇಂಡಿಗೋ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲು ಭೋಪಾಲ್‌ಗೆ ಕಡೆ ತಿರುಗಿಸಲಾಗಿತ್ತು. ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ಭೋಪಾಲ್ ವಿಮಾನ ನಿಲ್ದಾಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಇಂಡಿಗೋ ಕಂಪನಿ, “ಸೂರತ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನವನ್ನು ಮುನ್ನೆಚ್ಚರಿಕೆಯಾಗಿ ಭೋಪಾಲ್ ಕಡೆಗೆ ತಿರುಗಿಸಲಾಯಿತು. ಹಾರಾಟದ ಸಮಯದಲ್ಲಿ ಪೈಲಟ್ ಗಮನಕ್ಕೆ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಎಚ್ಚರಿಕೆಯಂತೆ ಭೋಪಾಲ್‌ನಲ್ಲಿ ಇಳಿಸಲಾಯಿತು. ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನ ಕೋಲ್ಕತ್ತಾಗೆ ಕಳುಹಿಸಲಾಯಿತು. ಸದ್ಯ ಭೋಪಾಲ್‌ನಲ್ಲಿರುವ ವಿಮಾನವನ್ನು ಪರಿಶೀಲನೆ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ” ಎಂದು ಹೇಳಿದೆ.
Advertisement
ಒಡಿಶಾದಿಂದ 50 ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಸಂಜೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿತ್ತು.