ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಗಾಯಾಳು ಆಟಗಾರರ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ತಿಳಿಸಿದ್ದಾರೆ.
Advertisement
ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಭಾರತ ತಂಡದ ಆಟಗಾರರಾದ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯಕ್ಕೆ ತುತ್ತಾಗಿ ತವರಿಗೆ ಮರಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಬದಲಿ ಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಕಳುಹಿಸಲು ಬಿಸಿಸಿಐ ಪ್ಲಾನ್ ಮಾಡಿತ್ತು. ಆದರೆ ಇದೀಗ ಈ ನಿರ್ಧಾರದಲ್ಲಿ ಬದಲಾವಣೆ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎಂಬ ಕುರಿತು ವರದಿಯಾಗಿತ್ತು. ಇದನ್ನೂ ಓದಿ: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?
Advertisement
Eng vs Ind: No change in plan as BCCI Secretary backs team's request to fly in Surya and Shaw
Read @ANI Story | https://t.co/twuQZKJaOX#BCCI #PrithviShaw #Suryakumar pic.twitter.com/ECyNnFVphq
— ANI Digital (@ani_digital) July 31, 2021
Advertisement
ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡದಲ್ಲಿ ಯಾದವ್ ಮತ್ತು ಪೃಥ್ವಿ ಶಾ ಆಡಿದ್ದರು. ಆದರೆ ಎರಡನೇ ಟಿ20 ಪಂದ್ಯದ ವೇಳೆ ಕೃನಾಲ್ ಪಾಂಡ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹಾಗಾಗಿ ಅವರೊಂದಿಗೆ ಸಂಪರ್ಕದಲ್ಲಿದ್ದ 8 ಮಂದಿ ಆಟಗಾರರನ್ನು ಪರೀಕ್ಷೆ ಒಳಪಡಿಸಲಾಗಿದೆ. ಆ 8 ಮಂದಿ ಆಟಗಾರರ ಪೈಕಿ ಯಾದವ್ ಮತ್ತು ಪೃಥ್ವಿ ಶಾ ಕೂಡ ಇಬ್ಬರಾಗಿದ್ದಾರೆ. ಆದರೆ ಅವರು ಪರೀಕ್ಷಿಸಿದಾಗ ನೆಗೆಟಿವ್ ಬಂದಿದೆ. ಹಾಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಕಳುಹಿಸಿ ಕೊಡುವ ನಿರ್ಧರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
Advertisement
ನಾವು ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಇಂಗ್ಲೆಂಡ್‍ಗೆ ಕಳುಹಿಸಿಕೊಡುವ ಬಗ್ಗೆ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ಅವರೊಂದಿಗೆ ಚರ್ಚಿಸಿದ್ದೇವೆ. ಇವರಿಬ್ಬರು ಐಸೋಲೇಷನ್‍ನಲ್ಲಿರುವುದರಿಂದಾಗಿ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಇಂಗ್ಲೆಂಡ್‍ಗೆ ಕಳುಹಿಸಿಕೊಡುತ್ತೇವೆ. ಎಂದು ಜೇ ಶಾ ಸ್ಪಷ್ಟ ಪಡಿಸಿದ್ದಾರೆ.