ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಹೆಲಿ ಟೂರಿಸಂ’ ಯೋಜನೆಗೆ ಪ್ಲಾನ್ ಮಾಡಲಾಗುತ್ತಿದ್ದು, ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸೇವ್ ಮೈಸೂರು ಕ್ಯಾಂಪೇನ್‍ಗೆ ನನ್ನ ಬೆಂಬಲ ಇದೆ ಎಂದು ತಿಳಿಸಿದ್ದಾರೆ.
Advertisement
ಈ ಸಂಬಂಧ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ನಟ, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡೋ ಸಲುವಾಗಿ ಲಲಿತ ಮಹಲ್ ಹೋಟೆಲ್ ಮುಂಭಾಗದ ಮರಗಳನ್ನ ಕಡಿಯೋ ವಿಚಾರ ಗಮನಕ್ಕೆ ಬಂತು.ನಾವುಗಳು ಮರ ಬೆಳೆಸಲು ಆಗದಿದ್ದರೂ ಮರ ಕತ್ತರಿಸಲು ಮುಂದಾಗಬಾರದು. ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಸಮಯದಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೇನೆ.
Advertisement
ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡೋ ಸಲುವಾಗಿ ಲಲಿತ ಮಹಲ್ ಹೋಟೆಲ್ ಮುಂಭಾಗದ ಮರಗಳನ್ನ ಕಡಿಯೋ ವಿಚಾರ ಗಮನಕ್ಕೆ ಬಂತು.ನಾವುಗಳು ಮರ ಬೆಳೆಸಲು…
Posted by Duniya Vijay on Wednesday, April 14, 2021
ಮರಗಳ ನಡುವೆ ಓಡಾಡಿ ಖುಷಿ ಪಟ್ಟಿದ್ದೇನೆ. ಈ ಯೋಜನೆಯನ್ನ ಮತ್ತೊಮ್ಮೆ ಪರಾಮರ್ಶೆ ಮಾಡಿ, ಮರ ಕಡಿಯೋದನ್ನ ಬಿಟ್ಟು ಪರ್ಯಾಯವಾಗಿ ಹೆಲಿ ಟೂರಿಸಂ ಮಾಡೋ ಪ್ಲಾನ್ ಮಾಡಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಹೇಗಿರೋತ್ತೋ ಮರ ಕಡಿದು ಪರಿಸರ ಹಾಳು ಮಾಡಿ ಹೆಲಿ ಟೂರಿಸಂ ಮಾಡುವುದಕ್ಕೂ ಅಷ್ಟೇ ವಿರೋಧ ಇರುತ್ತೆ. ಸೇವ್ ಮೈಸೂರು ಕ್ಯಾಂಪೇನ್‍ಗೆ ನನ್ನ ಬೆಂಬಲ ಇದೆ. ಸರ್ಕಾರ ಈ ಯೋಜನೆ ಬಗ್ಗೆ ಮತ್ತೊಮ್ಮೆ ಯೋಚಿಸಲಿ ಎಂದು ಹೇಳಿದ್ದಾರೆ.
Advertisement
Advertisement
ಈ ಹಿಂದೆ ಸಂಸದ ಪ್ರತಾಪ್ ಸಿಂಹ, ಪರಿಸರ ಪ್ರೇಮಿಗಳಿಂದ ಕೂಡ ಹೆಲಿ ಟೂರಿಸಂ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಈ ಯೋಜನೆ ವಿರುದ್ಧ ಒಂದು ಅಭಿಯಾನವೇ ಆರಂಭವಾಗಿದ್ದು, ಮರಗಳನ್ನು ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸಿ ಬೆಂಬಲ ಸೂಚಿಸುತ್ತಿದ್ದಾರೆ.