ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಕಾರಣ 3ನೇ ಬಾರಿಗೆ ಸಚಿವರು ಕ್ವಾರಂಟೈನ್ ಆಗುತ್ತರಾ ಎಂಬ ಅನುಮಾನ ಮೂಡಿತ್ತು. ಆದರೆ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
Advertisement
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಚಿವರು, ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು, ಮತ್ತೊಮ್ಮೆ ನಾನು ಕ್ವಾರಂಟೈನ್ ಆಗಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಆಪ್ತ ಸಹಾಯಕನಿಗೆ ಕೊರೋನಾ ಸೋಂಕು ತಗುಲಿದ್ದು ಮತ್ತೊಮ್ಮೆ ನಾನು ಕ್ವಾರಂಟೈನ್ ಆಗಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ
— Dr Sudhakar K (@mla_sudhakar) July 28, 2020
Advertisement
ಸಚಿವ ಸುಧಾಕರ್ ಅವರ ಆಪ್ತ ಸಹಾಯಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದ ಹಿನ್ನೆಲೆ, ವಿಧಾನಸೌಧದ ಸುಧಾಕರ್ ಅವರ ಕಚೇರಿ 339 ಕೊಠಡಿ ಹಾಗೂ ಆಪ್ತ ಸಿಬ್ಬಂದಿ ಶಾಖೆ ಇದ್ದ 339-ಎ ಕೊಠಡಿಯನ್ನು ಸ್ಯಾನಿಟೈಸ್ ಮಾಡಿ ಸೀಲ್‍ಡೌನ್ ಮಾಡಲಾಗಿತ್ತು. ಅಲ್ಲದೇ ಕೊಠಡಿಯತ್ತಾ ಯಾರು ತೆರಳದಂತೆ ಚೇರ್‌ಗಳನ್ನು ಅಡ್ಡ ಇಟ್ಟು ಬಂದ್ ಮಾಡಲಾಗಿತ್ತು.
Advertisement
ಈ ಹಿಂದೆ ಸಚಿವ ಸುಧಾಕರ್ ಅವರ ಕುಟುಂಸ್ಥರು ಹಾಗೂ ಆಪ್ತ ವಲಯದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಎರಡು ಸಂದರ್ಭದಲ್ಲಿ ಸಚಿವರು ಕ್ವಾರಂಟೈನ್ ಆಗಿದ್ದರು.