ಬೆಂಗಳೂರು: ಕೊರೊನಾದಿಂದ ನಿಧನರಾದ ಮಹದೇವಪುರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅನೇಕರ ಮನೆಗಳಿಗೆ ಭೇಟಿ ನೀಡಿ ಅವರ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸವನ್ನು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಮಾಡಿದ್ದಾರೆ. ಇದನ್ನೂ ಓದಿ: ವೀಡಿಯೋ ವೈರಲ್: ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದ ಮುನ್ಸಿಪಲ್ ಆಫೀಸರ್
ಕಳೆದ ನಾಲ್ಕು ದಿನಗಳಿಂದ ಈ ರೀತಿ ಸಾವಿಗೀಡಾದವರ ಅನೇಕರ ಮನೆಗಳಿಗೆ ಸತತವಾಗಿ ಭೇಟಿನೀಡುತ್ತಿರುವ ಸಚಿವ ಅರವಿಂದ ಲಿಂಬಾವಳಿ ಅವರು ಇಂದೂ ಸಹ ಮುಂದುವರೆಸಿದ್ದಾರೆ. ಇಂದು ಹೂಡಿಯಲ್ಲಿ ಕೋವಿಡ್ ನಿಂದ ನಿಧನರಾದ ಶ್ರೀ ವೆಂಕಟೇಶ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿಸಲು ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಧೈರ್ಯ ತುಂಬಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಬುದ್ಧಿ ಇಲ್ಲ, ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲು ವಿಫಲ: ಈಶ್ವರಪ್ಪ
ಮಹದೇವಪುರ ಕ್ಷೇತ್ರದ ಕಾಡ ಅಗ್ರಹಾರದ ಪಕ್ಷದ ಮುಖಂಡರಾದ ಶ್ರೀ ವೆಂಕಟೇಶ ಅವರು ಕೋವಿಡ್ ನಿಂದ ನಿಧನರಾದ ಹಿನ್ನೆಲೆಯಲ್ಲಿ ಇಂದು ಅವರ ಮೆನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಲಾಯಿತು. #StayStrongIndia pic.twitter.com/hveX3pDimF
— Aravind Limbavali (@ArvindLBJP) June 11, 2021
ಕಾಡ ಅಗ್ರಹಾರದ ಶ್ರೀ ವೆಂಕಟೇಶ ಅವರು ಕೋವಿಡ್ ನಿಂದ ನಿಧನರಾದ ಹಿನ್ನೆಲೆಯಲ್ಲಿ ಇಂದು ಅವರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರ ಭಾವನೆಗಳಿಗೆ ಸ್ಪಂದಿಸಿದ ಸಚಿವ ಅರವಿಂದ ಲಿಂಬಾವಳಿ ಅವರ ನೆರವಿಗೆ ನಾವು ಸದಾ ಇರುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.