ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಮತ್ತೆ ಸೀಲ್‍ಡೌನ್ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.
ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಎಲ್ಲೆಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆಯೋ ಆ ಭಾಗವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು. ಸದ್ಯದ ಸ್ಥಿತಿಗತಿಗಳನ್ನ ನೋಡಿಕೊಂಡು ಸರ್ಕಾರ ಬದಲಾವಣೆ ಮಾಡುತ್ತದೆ ಎಂದು ತಿಳಿಸಿದರು.
Advertisement
Advertisement
ಸೋಂಕಿತರ ನಾಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ. ಪಾಸಿಟಿವ್ ಆದವರು ದಯವಿಟ್ಟು ತಿಳಿಸಬೇಕು. ಬೇರೆಯವರಿಗೆ ಹರಡುವಂತೆ ಮಾಡಬೇಡಿ ಎಂದು ಮನವಿ ಮಾಡಿದರು.