ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಮಹಾರಾಷ್ಟ್ರ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನ ನೀಡಿ ಅಭಿನಂದನೆ ತಿಳಿಸಿದ್ದಾರೆ.
ನಟ ಸೋನು ಸೂದ್ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ನಂತರ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದರು. ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ: 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್
Advertisement
Advertisement
ಅಷ್ಟೇ ಅಲ್ಲದೇ ಸೋನು ಸೂದ್ ಅವರ ಉತ್ತಮ ಕಾರ್ಯವನ್ನು ಸರ್ಕಾರ ಕೂಡ ಮೆಚ್ಚಿದೆ. ಹೀಗಾಗಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ನಟ ಸೋನು ಸೂದ್‍ಗೆ ರಾಜಭವನಕ್ಕೆ ಆಹ್ವಾನ ನೀಡಿದ್ದರು. ಅದರಂತೆಯೇ ಸೋನು ಸೂದ್ ರಾಜ್ಯಪಾಲರನ್ನು ಭೇಟಿ ಮಾಡಿ, ತಾವು ಮಾಡುತ್ತಿರುವ, ಮಾಡಿರುವ ಕಾರ್ಯವನ್ನು ತಿಳಿಸಿದ್ದಾರೆ.
Advertisement
ಈ ಬಗ್ಗೆ ಸ್ವತಃ ರಾಜ್ಯಪಾಲರು ಟ್ವೀಟ್ ಮಾಡಿ ತಿಳಿಸಿದ್ದಾರೆ. “ನಟ ಸೋನು ಸೂದ್ ಅವರನ್ನು ಮುಂಬೈ ರಾಜಭವನದಲ್ಲಿ ಭೇಟಿಯಾಗಿದ್ದೆ. ಅವರು ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ನಿವಾಸಕ್ಕೆ ತಲುಪಲು ಮಾಡಿರುವ ಸಹಾಯ ಹಾಗೂ ಅವರಿಗೆ ಆಹಾರ ವ್ಯವಸ್ಥೆ ಮಾಡಿದ ಬಗ್ಗೆ ವಿವರಿಸಿದರು. ಅವರ ಮಹತ್ಕಾರ್ಯವನ್ನು ಶ್ಲಾಘಿಸಿದ್ದೇನೆ. ಅಲ್ಲದೇ ಅವರ ಸಾಮಾಜಿಕ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.
Advertisement
ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದರು.
ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯರ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.
Film star @SonuSood called on at Raj Bhavan, Mumbai today. Shri Sood briefed about his ongoing work to help the migrant people to reach their home states and to provide them food. Applauded his great work and assured him of his fullest support in these endeavours. pic.twitter.com/oUMfIQGTeX
— Bhagat Singh Koshyari (@BSKoshyari) May 30, 2020
ತಕ್ಷಣ ಯುವತಿಯರಿಗೆ ಸಹಾಯ ಮಾಡಲು ಮುಂದಾಗಿದ್ದು, ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದರು. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದರು. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದರು. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದರು.