ಬೆಂಗಳೂರು: 11 ಜಿಲ್ಲೆಗಳಲ್ಲಿ ಲಾಕ್‍ಡೌನ್, ಉಳಿದ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಕರ್ನಾಟಕ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಪಾಸಿಟಿವ್ ರೇಟ್ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಇದನ್ನೂ ಓದಿ: ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ
Advertisement
Advertisement
ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲ ಸಡಿಲಿಕೆಗಳೊಂದಿಗೆ ಜೂನ್ 14 ರ ಬೇಳಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
Advertisement
ಮಾರ್ಗಸೂಚಿಯಲ್ಲಿ ಏನಿದೆ?
ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿದ್ದರೆ, ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
Advertisement
ಈ ಹಿಂದಿನ ಆದೇಶದಲ್ಲಿದ್ದಂತೆ ಮದುವೆಗೆ 40 ಮಂದಿ, ಅಂತ್ಯಸಂಸ್ಕಾರಕ್ಕೆ ಗರಿಷ್ಟ 5 ಮಂದಿ ಭಾಗವಹಿಸಲು ಮಾತ್ರ ಅನುಮತಿ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
ಪಾರ್ಕ್‍ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ, ಈ ವೇಳೆ ಗುಂಪುಗೂಡುವಂತಿಲ್ಲ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚರಿಸಬಹುದು.