ಸೌಹಾರ್ದಯುತವಾಗಿ ಜಲ ವಿವಾದ ಬಗೆಹರಿಸಿಕೊಳ್ಳೋಣ – ಬೊಮ್ಮಾಯಿ, ಪವಾರ್ ಚರ್ಚೆ

Public TV
1 Min Read
sharad pawar Bommai

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಶರದ್ ಪವಾರ್ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದರು.

ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ, ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಇದನ್ನೂ ಓದಿ : 48 ಗಂಟೆಯೊಳಗೆ ವಿದೇಶಿ ಕಾರಿನ ತೆರಿಗೆ ಪಾವತಿಸಿ – ಧನುಷ್‍ಗೆ ಹೈಕೋರ್ಟ್ ಆದೇಶ

ಉಭಯ ರಾಜ್ಯಗಳ ನಡುವಿನ ಅಂತರ್ ರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದರು. ಈ ಕುರಿತಂತೆ ನವದೆಹಲಿಯಲ್ಲಿ ಶೀಘ್ರ ಸಭೆ ನಿಗದಿ ಮಾಡಿ ಈ ಸಂಬಂಧ ವಿಸ್ತೃತವಾಗಿ ಚರ್ಚೆಸೋಣ ಎಂದು ಪವಾರ್ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *