– ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ
ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ.
Advertisement
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಅವರನ್ನು ಅಮಾನತು ಮಾಡಲಾಗಿದೆ.
Advertisement
Advertisement
ಅಮಾನತುಗೊಂಡ ಬಸವನಹಳ್ಳಿ ಪೊಲೀಸರು ಗಾಂಜಾ ಕೇಸ್‍ನಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3.40 ಲಕ್ಷ ರೂ. ಪಡೆದಿದ್ದರು ಎಂದು ಹೇಳಲಾಗಿದೆ. ಇನ್ನು ಆಲ್ದೂರು ಠಾಣೆಯ ಪೊಲೀಸರು ಸಹ ಹೋಮ್ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದರು ಎನ್ನಲಾಗಿದೆ. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಓರ್ವ ಪಿಎಸ್‍ಐ ಹಾಗೂ ಏಳು ಸಿಬ್ಬಂದಿಯನ್ನು ಅಮಾನತು ಮಾಡಿದ್ದು, ಅಮಾನತಾದ ಎಲ್ಲರೂ ಇಲಾಖಾ ತನಿಖೆ ಎದುರಿಸಬೇಕಿದೆ.