ಚಿಕ್ಕೋಡಿ/ಬೆಳಗಾವಿ: ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಅಲೆಮಾರಿ ಕುಟುಂಬಗಳಿಗೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪೊಲೀಸರು ದಿನಸಿ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
Advertisement
ಸಂಕೇಶ್ವರ ಪಟ್ಟಣದ ವಿವಿಧೆಡೆ ಇರುವ 80ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳಿಗೆ ಪಿಎಸ್‍ಐ ಗಣಪತಿ ಕೊಗನೊಳ್ಳಿ ಹಾಗೂ ಹವಾಲ್ದಾರ ಭೀಮಪ್ಪ ನಾಗನೂರೆ ನೇತೃತ್ವದಲ್ಲಿ ಪೊಲೀಸರು ತಮ್ಮ ವೇತನದಿಂದ ಹಣ ಸಂಗ್ರಹಿಸಿ ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ. ಕುಟುಂಬಗಳಿಗೆ ಆಹಾರದ ಕೊರತೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಅಕ್ಕಿ, ಅಡುಗೆ ಎಣ್ಣೆ, ಬೇಳೆ ಕಾಳುಗಳು, ಗೋದಿ ಹಿಟ್ಟು, ಬ್ರೆಡ್, ಬಿಸ್ಕೆಟ್ ಸೇರಿದಂತೆ ವಿವಿಧ ಆಹಾರದ ವಸ್ತುಗಳನ್ನು ಪೂರೈಸಿದ್ದಾರೆ.
Advertisement
Advertisement
ಲಾಕ್‍ಡೌನ್ ಆದಾಗಿನಿಂದಲೂ ವಾರಕ್ಕೆ ಒಂದು ಬಾರಿ ಈ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಪೊಲೀಸರು ನೀಡುತ್ತಿದ್ದಾರೆ. ಸಂಕೇಶ್ವರ ಪಟ್ಟಣದ 80 ಕುಟುಂಬಗಳು ಅಂದರೆ ಸಾವಿರಕ್ಕೂ ಹೆಚ್ಚು ಜನರಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಡ ಕುಟುಂಬಗಳ ಪರವಾಗಿ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.