Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ- ಎಚ್ಡಿಕೆ ಕಿಡಿ

Public TV
Last updated: June 18, 2021 12:36 pm
Public TV
Share
5 Min Read
HDK 1 1
SHARE

ಬೆಂಗಳೂರು: ಮೇಕೆದಾಟು ಮತ್ತು ಕಾವೇರಿ ನದಿ ವಿವಾದವನ್ನ ಸರಿಯಾಗಿ ಬಗೆಹರಿಸದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕವಾಗಿ ಕಿಡಿಕಾರಿದ್ದಾರೆ. ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಸಮಸ್ಯೆಯನ್ನ ಅಣ್ಣ ತಮ್ಮಂದಿರಂತೆ ಬಗೆಹರಿಸಿಕೊಳ್ಳೋಣ ಅಂತ ತಮಿಳುನಾಡು ಸಿಎಂ ಸ್ಟಾಲಿನ್‍ಗೆ ಮನವಿ ಮಾಡಿದ್ದಾರೆ.

ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ–ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲ–ಜಲ, ಭಾಷೆ–ನುಡಿಯ ಬಗ್ಗೆ ಅಕ್ಕರೆ ಇದ್ದೀತೆ?
1/10

— H D Kumaraswamy (@hd_kumaraswamy) June 18, 2021

ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ.ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲಜಲ, ಭಾಷೆನುಡಿಯ ಬಗ್ಗೆ ಅಕ್ಕರೆ ಇದ್ದೀತೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್

ಇತ್ತೀಚೆಗೆ @narendramodi ಅವರನ್ನು ಭೇಟಿಯಾಗಿರುವ ತಮಿಳುನಾಡು  ಸಿಎಂ @mkstalin ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಆಡಳಿತಾರೂಢ ಬಿಜೆಪಿ ಮೈಮರೆತು ಕುಳಿತಿದೆ.
2/10

— H D Kumaraswamy (@hd_kumaraswamy) June 18, 2021

ಇತ್ತೀಚೆಗೆ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಆಡಳಿತಾರೂಢ ಬಿಜೆಪಿ ಮೈಮರೆತು ಕುಳಿತಿದೆ. ಮೇಕೆದಾಟು ಅಣೆಕಟ್ಟು ಯೋಜನೆ ರೂಪಿಸಲೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ. ನನ್ನ ಸರ್ಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು.ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ. ರಾಜ್ಯ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಯೋಜನೆ ಅನಿಶ್ಚಿತತೆ ಎದುರಿಸುತ್ತಿದೆ. ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ ಎಂದು ಆಕ್ರೋಶವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:  ಅತಿ ಹೆಚ್ಚು, ಅತಿ ಕಡಿಮೆ ಅನುದಾನ ಯಾರಿಗೆ ಸಿಕ್ಕಿದೆ? – ರಹಸ್ಯ ರಿಪೋರ್ಟ್ ಔಟ್

ಮೇಕೆದಾಟು ಅಣೆಕಟ್ಟು ಯೋಜನೆ ರೂಪಿಸಲೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ. ನನ್ನ ಸರ್ಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು.ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ. ರಾಜ್ಯ–ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಯೋಜನೆ ಅನಿಶ್ಚಿತತೆ ಎದುರಿಸುತ್ತಿದೆ. ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ.
3/10

— H D Kumaraswamy (@hd_kumaraswamy) June 18, 2021

ರಾಜ್ಯದ ಜನ ಗಮನಿಸಬೇಕು. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವುದು ಪ್ರಾದೇಶಿಕ ಪಕ್ಷ. ಪ್ರಾದೇಶಿಕತೆ, ಅಸ್ಮಿತೆ ವಿಚಾರದಲ್ಲಿ ತಮಿಳುನಾಡು ಪ್ರಬಲವಾಗಿದೆ.ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳೇ ಹೆಚ್ಚು ಅಧಿಕಾರದಲ್ಲಿದ್ದರೂ ರಾಜ್ಯದ ಅಸ್ಮಿತೆ, ಪ್ರಾದೇಶಿಕತೆ ರಕ್ಷಣೆ ಸಾಧ್ಯವಾಗುತ್ತಿಲ್ಲ.ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷವೇ ಅಗತ್ಯ. ಸ್ಟಾಲಿನ್ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು.ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ.ದಕ್ಷಿಣ ಭಾರತದ ರಾಜ್ಯಗಳು, ಭಾಷೆ, ಸಂಸ್ಕøತಿ ವಿಚಾರದಲ್ಲಿ ಈಗಿನ ಕೇಂದ್ರ ಸರ್ಕಾರ ಅತ್ಯಂತ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.

ರಾಜ್ಯದ ಜನ ಗಮನಿಸಬೇಕು. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವುದು ಪ್ರಾದೇಶಿಕ ಪಕ್ಷ. ಪ್ರಾದೇಶಿಕತೆ, ಅಸ್ಮಿತೆ ವಿಚಾರದಲ್ಲಿ ತಮಿಳುನಾಡು ಪ್ರಬಲವಾಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳೇ ಹೆಚ್ಚು ಅಧಿಕಾರದಲ್ಲಿದ್ದರೂ ರಾಜ್ಯದ ಅಸ್ಮಿತೆ, ಪ್ರಾದೇಶಿಕತೆ ರಕ್ಷಣೆ ಸಾಧ್ಯವಾಗುತ್ತಿಲ್ಲ. ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷವೇ ಅಗತ್ಯ.
4/10

— H D Kumaraswamy (@hd_kumaraswamy) June 18, 2021

ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ವಿಚಾರದ ಮೂಲಕ ಒಡೆದುಹೋಗಬಾರದು.ನಮ್ಮ ಅಸ್ಮಿತೆಗಳ ರಕ್ಷಣೆಗಾಗಿ ನಾವು ಈಗ ಒಗ್ಗಟ್ಟಿನಿಂದ ಇರಬೇಕಾದ ಕಾಲ ಎಂಬುದನ್ನು ಸ್ಟಾಲಿನ್ ಗಮನಿಸಬೇಕು. ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯವನ್ನು ಆಗಲು ಬಿಡಲಿ.ಇದರಿಂದ ತಮಿಳುನಾಡಿಗೆ ಯಾವ ತೊಂದರೆಯೂ ಇಲ್ಲ ಎಂಬುದನ್ನು ಈಗಾಗಲೇ ವಿವರಿಸಲಾಗಿದೆ.ಇದು ನೀರಾವರಿ ಉದ್ದೇಶದ ಯೋಜನೆಯಲ್ಲ.ಬದಲಿಗೆ ಕುಡಿಯುವ ನೀರಿನ ಉದ್ದೇಶದ ಯೋಜನೆಯಾಗಿದೆ.ಈ ವಿಚಾರವನ್ನು ಸ್ಟಾಲಿನ್ ಅವರು ಗಮನಿಸಬೇಕು ಎಂದು ಹೇಳಿದ್ದಾರೆ.

ಸ್ಟಾಲಿನ್‌ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು. ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ.
5/10

— H D Kumaraswamy (@hd_kumaraswamy) June 18, 2021

ಜಲಾಶಯದ ವಿಚಾರದಲ್ಲಿ ಕರ್ನಾಟಕದೊಂದಿಗೆ ಸಹಕರಿಸಬೇಕು. ಕಳೆದ ಮೂರ್ನಾಲ್ಕು ವರ್ಷಗಳಿಂದ ಕರ್ನಾಟಕ ತಮಿಳುನಾಡಿಗೆ ನಿಗದಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಕೊಟ್ಟಿದೆ. ಪಕೃತಿ ಸಹಕರಿಸಿದಾಗ ಹೆಚ್ಚಿನ ನೀರನ್ನು ಹರಿಸಿದೆ. ಬರಗಾಲದಂಥ ಸಂದರ್ಭದಲ್ಲೂ ಕರ್ನಾಟಕವು ತಮಿಳುನಾಡಿಗೆ ಎಂದೂ ದ್ರೋಹ ಬಗೆದಿಲ್ಲ. ಹೀಗಾಗಿ ನೀರಿನ ಹಂಚಿಕೆ ವಿಚಾರದಲ್ಲಿ ಸೋದರ ಸ್ಟಾಲಿನ್ ಅವರಿಗೆ ಯಾವ ಅನುಮಾನಗಳೂ, ಆತಂಕಗಳೂ ಬೇಡ ಎಂದಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳು, ಭಾಷೆ, ಸಂಸ್ಕೃತಿ ವಿಚಾರದಲ್ಲಿ ಈಗಿನ ಕೇಂದ್ರ ಸರ್ಕಾರ ಅತ್ಯಂತ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಹೊತ್ತಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ವಿಚಾರದ ಮೂಲಕ ಒಡೆದುಹೋಗಬಾರದು. ನಮ್ಮ ಅಸ್ಮಿತೆಗಳ ರಕ್ಷಣೆಗಾಗಿ ನಾವು ಈಗ ಒಗ್ಗಟ್ಟಿನಿಂದ ಇರಬೇಕಾದ ಕಾಲ ಎಂಬುದನ್ನು ಸ್ಟಾಲಿನ್‌ ಗಮನಿಸಬೇಕು.
6/10

— H D Kumaraswamy (@hd_kumaraswamy) June 18, 2021

ತಮಿಳುನಾಡು ರೈತರನ್ನು ವಂಚಿಸಿ ಕರ್ನಾಟಕ ತನ್ನ ರೈತರನ್ನು ರಕ್ಷಿಸಿದ ಉದಾಹರಣೆ ಇಲ್ಲ. ರೈತರೆಂದರೆ ರೈತರೇ, ಭೂಮಿತಾಯಿಯ ಮಕ್ಕಳು. ನಮ್ಮ ಅಣ್ಣ ತಮ್ಮಂದಿರು.ಕಾವೇರಿ ವಿಚಾರದಲ್ಲಿ ಈಗ ನಾವಿಬ್ಬರು. ಅಂದರೆ ರಾಜಕಾರಣಿಗಳೂ ಅಣ್ಣತಮ್ಮಂದಿರಾಗೋಣ.ಸೋದರ ಭಾವನೆಯೊಂದಿಗೆ ಸ್ಟಾಲಿನ್ ಒಂದು ಹೆಜ್ಜೆ ಮುಂದೆ ಬಂದರೆ ನಾನಂತೂ ಎರಡು ಹೆಜ್ಜೆ ಮುಂದಿಡುವೆ.ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು.ಈ ಮೂಲಕ ನಾವು ಒಗ್ಗಟ್ಟಾಗೇ ಉಳಿಯಬೇಕು.ಸ್ಟಾಲಿನ್ ಅವರ ಅಧಿಕಾರವಧಿಯಲ್ಲಿ ಈ ಪ್ರಯತ್ನ ಆಗಲಿ.ಅದಕ್ಕೆ ನನ್ನ ಬೆಂಬಲ ಇರಲಿದೆ. ಈ ರಾಜ್ಯಗಳ ಸೋದರತೆ ರಕ್ಷಣೆ ಈಗಿನ ಅಗತ್ಯ ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷಗಳಿಂದ ಕರ್ನಾಟಕ ತಮಿಳುನಾಡಿಗೆ ನಿಗದಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಕೊಟ್ಟಿದೆ. ಪಕೃತಿ ಸಹಕರಿಸಿದಾಗ ಹೆಚ್ಚಿನ ನೀರನ್ನು ಹರಿಸಿದೆ. ಬರಗಾಲದಂಥ ಸಂದರ್ಭದಲ್ಲೂ ಕರ್ನಾಟಕವು ತಮಿಳುನಾಡಿಗೆ ಎಂದೂ ದ್ರೋಹ ಬಗೆದಿಲ್ಲ. ಹೀಗಾಗಿ ನೀರಿನ ಹಂಚಿಕೆ ವಿಚಾರದಲ್ಲಿ ಸೋದರ ಸ್ಟಾಲಿನ್ ಅವರಿಗೆ ಯಾವ ಅನುಮಾನಗಳೂ, ಆತಂಕಗಳೂ ಬೇಡ.
8/10

— H D Kumaraswamy (@hd_kumaraswamy) June 18, 2021

ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು. ಈ ಮೂಲಕ ನಾವು ಒಗ್ಗಟ್ಟಾಗೇ ಉಳಿಯಬೇಕು. ಸ್ಟಾಲಿನ್ ಅವರ ಅಧಿಕಾರವಧಿಯಲ್ಲಿ ಈ ಪ್ರಯತ್ನ ಆಗಲಿ. ಅದಕ್ಕೆ ನನ್ನ ಬೆಂಬಲ ಇರಲಿದೆ. ಈ ರಾಜ್ಯಗಳ ಸೋದರತೆ ರಕ್ಷಣೆ ಈಗಿನ ಅಗತ್ಯ.‌
10/10

— H D Kumaraswamy (@hd_kumaraswamy) June 18, 2021

TAGGED:cauveryh d kumaraswamyM K Stalinmekedatuಎಚ್ ಡಿ ಕುಮಾರಸ್ವಾಮಿಕಾವೇರಿ ನದಿತಮಿಳುನಾಡು ಸಿಎಂ ಸ್ಟಾಲಿನ್ಪಬ್ಲಿಕ್ ಟಿವಿಬಿಜೆಪಿಮೇಕೆದಾಟುಸರ್ಕಾರ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Anushree
ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ
Bengaluru City Cinema Latest Main Post Sandalwood
radhika pandit ganesh chaturthi
ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Cinema Latest Sandalwood Top Stories
Ram Charan
1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್
Cinema Latest Mysuru South cinema
Upendra
ಉಪ್ಪಿ ಮನೆಯಲ್ಲಿ ಗಣೇಶ ಹಬ್ಬ ಭಲೇ ಜೋರು
Bengaluru City Cinema Latest Sandalwood
Gowri 3
ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ
Cinema Latest Sandalwood

You Might Also Like

pramoda devi wadiyar
Districts

ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

Public TV
By Public TV
3 hours ago
Commonwealth Games
Latest

2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

Public TV
By Public TV
3 hours ago
01 14
Big Bulletin

ಬಿಗ್‌ ಬುಲೆಟಿನ್‌ 27 August 2025 ಭಾಗ-1

Public TV
By Public TV
4 hours ago
02 10
Big Bulletin

ಬಿಗ್‌ ಬುಲೆಟಿನ್‌ 27 August 2025 ಭಾಗ-2

Public TV
By Public TV
4 hours ago
03 7
Big Bulletin

ಬಿಗ್‌ ಬುಲೆಟಿನ್‌ 27 August 2025 ಭಾಗ-3

Public TV
By Public TV
4 hours ago
Gadag Public TV Belaku Impact
Districts

ಗದಗದ ಬಡ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ – ಸಂಪೂರ್ಣ ಮನೆ ದುರಸ್ತಿ ಮಾಡಿಸಿಕೊಟ್ಟ ಉಸಿರು ಫೌಂಡೇಶನ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?