ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಕಲ್ಲುಮಣ್ಣು ಕಸಿದು ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ ನಲ್ಲಿ ಘಟನೆ ನಡೆದಿದೆ.
ಕಾರ್ಮಿಕ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಡರ್ ಗ್ರೌಂಡ್ ನಲ್ಲಿ ಕಾರ್ಯನಿರ್ವಹಿಸುವ ವೇಳೆ ಘಟನೆ ನಡೆದಿದ್ದು, ಹಟ್ಟಿ ಗೋಲ್ಡ್ ಮೈನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಅವಘಡಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಸುರಕ್ಷತಾ ಕ್ರಮಗಳನ್ನ ತೆಗೆದುಕೊಳ್ಳದೇ ಕೆಲಸ ಮಾಡಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
Advertisement
Advertisement
ಕೋವಿಡ್ ನಿಯಮ ಮೀರಿ ಕಾರ್ಮಿಕರಿಂದ ಅಧಿಕಾರಿಗಳು ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಶೇ.50 ರಷ್ಟು ಮಾತ್ರ ಕಾರ್ಮಿಕರನ್ನ ಬಳಸಿಕೊಳ್ಳಲು ಅನುಮತಿಯಿದ್ದರೂ ಶೇ.100 ರಷ್ಟು ಕಾರ್ಮಿಕರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಅವಧಿ ಮೀರಿ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿದ್ದು, ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಕೆಲಸದ ಅವಧಿಯಿದ್ದು, ಮಧ್ಯಾಹ್ನ 2.30 ರವರೆಗೆ ಕಾರ್ಮಿಕರಿಂದ ಕೆಲಸ ಮಾಡಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಸದ್ಯ ಗಾಯಾಳು ಹನುಮಂತ ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ವಾಯ್ಸ್ ಆಫ್ ನೀಡ್ ಫೌಂಡೇಶನ್ ವತಿಯಿಂದ ದಿವ್ಯಾಂಗರಿಗೆ ಕೋವಿಡ್ ಲಸಿಕೆ ಅಭಿಯಾನ