– 62 ಔಟ್ ಗೋಯಿಂಗ್, 42 ಇನ್ ಕಮಿಂಗ್ ಕಾಲ್
ಲಕ್ನೋ: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಉತ್ತರಪ್ರದೇಶದ ಪೊಲೀಸರು ತಿಳಿಸಿದ್ದಾರೆ.
Advertisement
ಸೆಪ್ಟೆಂಬರ್ ನಲ್ಲಿ ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಮಾರಣಾಂತಿಕ ಹಲ್ಲೆಯ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ. ಈತನ ಜೊತೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದ ಬಗ್ಗೆ ಪೊಲೀಸರಿಗೆ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!
Advertisement
Advertisement
ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿಯೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ಫೋನ್ ನಂಬರಿನಿಂದ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿವೆ. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿರುವ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
Advertisement
ಎರಡು ಫೋನ್ ನಂಬರ್ ಗಳ ನಡುವೆ 62 ಔಟ್ ಗೋಯಿಂಗ್ ಮತ್ತು 42 ಇನ್ ಕಮಿಂಗ್ ಕಾಲ್ ಗಳು ಬಂದಿದ್ದು, ಒಟ್ಟು 104 ಬಾರಿ ಸಂಪರ್ಕಸಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.
ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ
ಇತ್ತ ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಯುವತಿಯ ಮೇಲೆ ಕಾಮುಕರ ಅಟ್ಟಹಾಸ ಮೆರೆದು ಸಾವಿಗೆ ಕಾರಣವಾಗಿರುವ ಕುರಿತು ದೇಶಾದ್ಯಂತ ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದರು. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲ್ಪಟ್ಟ ಹತ್ರಾಸ್ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.