ಮೈಸೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ರಾತ್ರಿ 9 ಗಂಟೆಯಿಂದ ಮೇ 4ರ ಬೆಳಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶಕ್ಕೆ ನಿಷೇಧ ಹಾಕಲಾಗಿದೆ.
ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಭಕ್ತರು ಬರುವ ಹಿನ್ನೆಲೆ ನಿರ್ಬಂಧ ಹಾಕಲಾಗಿದೆ. ಚಾಮುಂಡಿ ತಾಯಿಗೆ ಎಂದಿನಂತೆ ಪೂಜೆ, ಪುನಸ್ಕಾರಗಳು ನಡೆಯಲಿವೆ ಎಂದು ಚಾಮುಂಡಿ ಬೆಟ್ಟದ ಕಾರ್ಯನಿರ್ವಹಣಾ ಅಧಿಕಾರಿಗಳು ಪ್ರಕಟನೆ ಮೂಲಕ ತಿಳಿಸಿದ್ದಾರೆ.
Advertisement
Advertisement
ಮೈಸೂರು ನಗರದಲ್ಲಿ 26 ಕಂಟೈನ್‍ಮೆಂಟ್ ಝೋನ್ ಗುರುತಿಸಲಾಗಿದ್ದು, ಸ್ಟಿಕ್ಕರ್ ಹಾಕಿ ಜಾಗೃತಿ ಮೂಡಿಸಲಾಗುತ್ತಿದೆ. ಮೈಸೂರಿನಲ್ಲಿ ಸಾರ್ವಜನಿಕರಿಗಾಗಿ ಸಹಾಯವಾಣಿ ಸಹ ಆರಂಭಿಸಲಾಗಿದೆ. ನೈಟ್ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ಲಾಕ್‍ಡೌನ್ ರಾಜ್ಯ ಸರ್ಕಾರ ಘೋಷಿಸಿದ ಬೆನ್ನಲ್ಲೇ ಏಪ್ರಿಲ್ 25 ರಂದು ನಿಗದಿಯಾಗಿದ್ದ ಕೆಸೆಟ್ ಪರೀಕ್ಷೆಯನ್ನ ಮೈಸೂರು ವಿವಿ ಮುಂದೂಡಿದೆ.
Advertisement