ಈಜಿಪ್ಟ್: ರೈಲು ಹಳಿ ತಪ್ಪಿ ಉರುಳಿಬಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಜಿಪ್ಟ್‍ನ ಕೈರೋ ಬಳಿ ನಡೆದಿದೆ.
ರೈಲು ಈಜಿಪ್ಟ್ ರಾಜಧಾನಿಯಿಂದ ಮನ್ಸೌರಾದ ನೇಲ್ ಡೆಲ್ಟಾ ನಗರಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲು ಹಳಿ ತಪ್ಪಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು 50ಕ್ಕೂ ಹೆಚ್ಚು ಅಂಬುಲೆನ್ಸ್‍ನಲ್ಲಿ ಕರೆದೊಯ್ದು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸಾವು-ನೋವುಗಳ ಸಂಖ್ಯೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.