ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹನೂರು ಬಳಿ ನಡೆದಿದೆ.
ಮೃತರನ್ನು ಶೇಕ್ ಫೈಜಲ್ (44), ಮೆಹಕ್ (33), ಶೇಕ್ ಅಲಿ (11) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಬೆಂಗಳೂರು ಮೂಲದ ಐದು ಮಂದಿ ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಹಲಗೂರು ಸಮೀಪದ ಮಹದೇಶ್ವರ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಯುವತಿಯರೊಂದಿಗೆ ಯುವಕರು ಕೆಆರ್‌ಎಸ್ ಹಿನ್ನೀರಿನಲ್ಲಿ ಮೋಜು-ಮಸ್ತಿ
ಮಹದೇಶ್ವರ ಪೆಟ್ರೋಲ್ ಬಂಕ್ ಬಳಿ ಇರುವ ತಿರುವಿನಲ್ಲಿ ವೇಗವಾಗ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ವೇಳೆ ಇದ್ದಕ್ಕಿದ್ದ ಹಾಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿ ಇದ್ದವರು ಮೂವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲಗೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.