– ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು
ಮಂಗಳೂರು: ಹಾಲಿನ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಟೆಂಪೋವನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಗ್ಗಿನ ಜಾವ ಕೆಎ 19 ಎಸಿ 4688 ನಂಬರಿನ ಹಾಲಿನ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಆಗುತ್ತಿದೆ ಎಂದು ಮಾಹಿತಿ ತಿಳಿದ ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಪಂಪ್ ವೆಲ್ ಬಳಿ ಕಾಯುತ್ತಿದ್ದರು. ಈ ವೇಳೆ ಹಾಲಿನ ವಾಹನ ಆಗಮಿಸಿದ್ದು ಕಾರ್ಯಕರ್ತರು ಟೆಂಪೋವನ್ನು ಬೆನ್ನಟ್ಟಿಕೊಂಡು ಬಂದಿದ್ದಾರೆ.
Advertisement
Advertisement
ಟೆಂಪೋ ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಅಂಗಡಿಗೆ ಹಾಲು ಹಾಕಲು ನಿಲ್ಲಿಸಿದಾಗ ಹಿಂಬಾಲಿಸಿಕೊಂಡು ಬಂದಿದ್ದ ಕಾರ್ಯಕರ್ತರು ಟೆಂಪೋವನ್ನು ಅಡ್ಡಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಬಂದರು ಠಾಣಾ ಪೊಲೀಸರು ಗೋಮಾಂಸ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
Advertisement
ಬಂದರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.