– ಮೂವರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಹಾವೇರಿ: ಸಹಾಯಕ ಪೊಲೀಸ್ ಸಬ್ ಇನ್ಸಪೆಕ್ಟರ್, ಸಿಆರ್ ಪಿಎಫ್ ಕಾನ್‍ಸ್ಟೇಬಲ್ ಸೇರಿ ಜಿಲ್ಲೆಯಲ್ಲಿ 14 ಜನರಿಗೆ ಸೋಂಕು ತಗುಲಿದೆ. ಅಲ್ಲದೆ ಕೊರೊನಾದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.
Advertisement
ಹಾವೇರಿ ಹಾಗೂ ಹಿರೇಕೆರೂರು ತಾಲೂಕಿನಲ್ಲಿ ತಲಾ ಐದು, ಶಿಗ್ಗಾಂವ, ರಾಣೇಬೆನ್ನೂರು, ಹಾನಗಲ್ ಹಾಗೂ ಬ್ಯಾಡಗಿ ತಾಲೂಕನಲ್ಲಿ ತಲಾ ಒಬ್ಬರಂತೆ 14 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್‍ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ನಿವಾಸಿ, ಜಮ್ಮು ಕಾಶ್ಮೀರದಿಂದ ಬಂದಿದ್ದ ಸಿಆರ್‍ಪಿಎಫ್ ಕಾನ್‍ಸ್ಟೇಬಲ್‍ಗೆ ಸಹ ಸೋಂಕು ತಗುಲಿದೆ. ಅಲ್ಲದೆ ಬೆಂಗಳೂರಿನಿಂದ ಬಂದಿದ್ದ ಹಾವೇರಿ ತಾಲೂಕು ಯತ್ತಿನಹಳ್ಳಿ ಗ್ರಾಮದ ಓರ್ವ ಹಾಗೂ ಬ್ಯಾಡಗಿ ತಾಲೂಕಿನ ಕಲ್ಲೆದೇವರು ಗ್ರಾಮದ ನಿವಾಸಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಹಾವೇರಿ ನಗರದ ನಾಗೇಂದ್ರನಮಟ್ಟಿಯ 25 ವರ್ಷದ ಗರ್ಭೀಣಿ ಮಹಿಳೆಗೆ ಕೊರೊನಾ ಒಕ್ಕರಿಸಿದೆ.
Advertisement
ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾರೆ. ಶಿಗ್ಗಾಂವಿ ಪಟ್ಟಣದ ಎಪ್ಪತ್ತು ವರ್ಷದ ಸೋಂಕಿತ ವೃದ್ಧೆ ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ರಾಣೆಬೆನ್ನೂರು ನಗರದ 42 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement
Advertisement
ಮೂರು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 302, ಈ ವರೆಗೆ 137 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಇಬ್ಬರು ಮೃತಪಟ್ಟಿದ್ದು, ಈ ವರೆಗೆ ಒಟ್ಟು 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 159 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಾಹಿತಿ ನೀಡಿದ್ದಾರೆ.