– 69ಕ್ಕೆ ಏರಿದ ಸೋಂಕಿತರ ಸಂಖ್ಯೆ
ಹಾವೇರಿ: ಜಿಲ್ಲೆಯಲ್ಲಿ ಇಂದು ಒಬ್ಬ ವೈದ್ಯ, ಮೂವರು ಆಶಾ ಕಾರ್ಯಕರ್ತೆಯರು ಸೇರಿ 12 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಜನರನ್ನು ಆಂತಕ್ಕೀಡು ಮಾಡಿದೆ.
Advertisement
ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮಾಸೂರಿನಲ್ಲಿ ವೈದ್ಯ ಸೇರಿ ಐವರಿಗೆ ಸೋಂಕು ಧೃಡಪಟ್ಟಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರೋಗಿ ನಂ.9546 ಪ್ರಾಥಮಿಕ ಸಂಪರ್ಕದಿಂದ ಈ ಐವರಿಗೆ ಸೋಂಕು ತಗುಲಿದೆ.
Advertisement
ಹಾನಗಲ್ ಪಟ್ಟಣದ ಮೂವರು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು ತಗುಲಿದ್ದು, ಆಶಾ ಕಾರ್ಯಕರ್ತೆಯರಿಗೆ ನಿಗದಿತ ತಪಾಸಣೆ ನಡೆಸಿದ್ದರಿಂದ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಸವಣೂರು ಪಟ್ಟಣದ ಕಂಟೈನ್ಮೆಂಟ್ ಝೋನ್‍ನ 23 ವರ್ಷದ ಗರ್ಭೀಣಿ ಮಹಿಳೆ ರೋಗಿ ನಂ.8699 ಸಂಪರ್ಕದಿಂದ ಇಬ್ಬರಿಗೆ ಸೋಂಕು ತಗುಲಿದೆ. ರಾಣೆಬೆನ್ನೂರು ನಗರದ ರೋಗಿ ನಂ.9411ರ ಪ್ರಾಥಮಿಕ ಸಂಪರ್ಕದಿಂದ ಐದು ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ.
Advertisement
Advertisement
ಒಟ್ಟು 12 ಸೋಂಕಿತರನ್ನು ಜಿಲ್ಲಾಸ್ಪತ್ರೆಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರು ವಾಸವಿದ್ದ ಪ್ರದೇಶವನ್ನು ಜಿಲ್ಲಾಡಳಿತ ಸೀಲ್‍ಡೌನ್ ಮಾಡಿದೆ. ಇಂದು 12 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿದೆ.