ಹಾಸನ: ಜಿಲ್ಲೆಯಲ್ಲಿ ಇಂದು ಸಹ ಕೊರೊನಾ ಅಟ್ಟಹಾಸ ಮುಂದುವರಿದಿದ್ದು ಪೊಲೀಸ್ ಸೇರಿದಂತೆ 7 ಜನರಿಗೆ ಸೋಂಕು ತಗುಲಿರೋದು ಖಚಿತವಾಗಿದೆ.
ನಗರದ ಬಡಾವಣೆ ಠಾಣೆಯ ಪೊಲೀಸ್ ಕಾನ್‍ಸ್ಟೇಬಲ್ ಸೇರಿ 7 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಇನ್ನಿಲ್ಲದ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಇಂದು ಪಾಸಿಟಿವ್ ಬಂದಿರುವ ಏಳು ಜನರಲ್ಲಿ ಓರ್ವ ಪೊಲೀಸ್ ಹಾಸನದವರಾಗಿದ್ದು, ಅವರು ಕೆಲಸ ಮಾಡುತ್ತಿದ್ದ ಬಡಾವಣೆ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಇನ್ನುಳಿದ ಆರು ಜನ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದು, ಅವರಲ್ಲಿ ಐವರು ಮುಂಬೈನಿಂದ ಬಂದಿದ್ದಾರೆ. ಮತ್ತೋರ್ವ ಬೆಂಗಳೂರು ಪ್ರಯಾಣದ ಹಿನ್ನೆಲೆಯನ್ನು ಹೊಂದಿದ್ದಾರೆ.
Advertisement
Advertisement
ಜಿಲ್ಲೆಯಲ್ಲಿ ಇಲ್ಲಿವರೆಗೆ 299 ಮಂದಿ ಕೊರೊನಾ ಸೋಂಕಿತರನ್ನು ಗುರುತಿಸಲಾಗಿದ್ದು, ಪ್ರತಿದಿನ ಸಂಖ್ಯೆ ಏರುತ್ತಲೇ ಇದೆ. ಈವರೆಗೆ ಒಟ್ಟು 215 ಜನ ಕೊರೊನಾ ಸೋಂಕಿನಿಂದ ಗುಣಮುಖರಾ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಸಕ್ರಿಯವಾಗಿರುವ 83 ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.