ಹಾಸನ: ದಿನದಿಂದ ದಿನಕ್ಕೆ ಹಾಸನದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಎಸ್.ಪಿ.ಆರ್.ಶ್ರೀನಿವಾಸ್ ಗೌಡರಿಗೂ ಕೋವಿಡ್ ಸೋಂಕು ತಗುಲಿದೆ. ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಶನ್ ನಲ್ಲಿದ್ದಾರೆ.
ಗುರುವಾರ ಸಂಜೆ ಆರೋಗ್ಯದಲ್ಲಿ ಸಮಸ್ಯೆಯುಂಟಾಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಕೋವಿಡ್ ಆರಂಭದ ದಿನಗಳಿಂದಲೂ ಮಹಾಮಾರಿ ನಿಯಂತ್ರಣಕ್ಕಾಗಿ ಹಗರಲಿರುಳು ಎನ್ನದೇ ಕಾರ್ಯ ನಿರ್ವಹಿಸಿದ್ದರು.
ಕಳೆದ ವರ್ಷದಿಂದ ಇಲ್ಲಿಯ ತನಕ ಹಾಸನದಲ್ಲಿ ಸುಮಾರು 31,379 ಪ್ರಕರಣಗಳು ಪತ್ತೆಯಾಗಿದ್ದು, 29,524 ಮಂದಿ ಗುಣಮುಖರಾಗಿದ್ದಾರೆ. ಒಂದು ವರ್ಷದಲ್ಲಿ 487 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 25 ಮಂದಿ ಐಸಿಯುವಿನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಜಿಲ್ಲೆಯಲ್ಲಿ 1,368 ಸಕ್ರಿಯ ಪ್ರಕರಣಗಳಿವೆ.