ಹಾಸನ: ಜಿಲ್ಲೆಯ ಆರೋಗ್ಯಾಧಿಕಾರಿ ಸತೀಶ್‍ಗೌಡ ಅವರ ಪತ್ನಿಗೂ ಇಂದು ಕೊರೊನಾ ಪಾಸಿಟಿವ್ ಬಂದಿದೆ.
ಕಳೆದ ಬುಧವಾರವಷ್ಟೇ ಹಾನಸದ ಡಿಎಚ್‍ಒ ಸತೀಶ್‍ಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಡಿಎಚ್‍ಒ ಪತ್ನಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ದಂಪತಿಯೂ ಜನಸಾಮಾನ್ಯರಂತೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ಡಿಎಚ್‍ಒ ಸತೀಶ್ ಕೊರೊನಾ ರೋಗ ಆರಂಭವಾದ ದಿನದಿಂದಲೂ ಜಿಲ್ಲೆಯಾದ್ಯಂತ ಅವಿರತವಾಗಿ ಕೆಲಸ ಮಾಡಿ ಕೊರೊನಾ ವಿರುದ್ಧ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಮಂಗಳವಾರ ಅವರಿಗೆ ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಬುಧವಾರ ಬಂದ ವರದಿಯಲ್ಲಿ ಡಿಎಚ್‍ಒ ಸತೀಶ್‍ಗೆ ಪಾಸಿಟಿವ್ ಕಂಡು ಬಂದಿತ್ತು. ಇಂದು ಅವರ ಪತ್ನಿಯಲ್ಲಿಯೂ ಸೋಂಕು ಕಾಣಿಸಿಕೊಂಡಿದೆ.