ನವದೆಹಲಿ: ಮೋದಿ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಟೀಕೆಗೆ ವಿರಾಮ ಹಾಕಲು ಕೇಂದ್ರ ಸರ್ಕಾರ ಈಗ ಮುಂದಾಗಿದೆ.
ಈ ಬಾರಿಯ ಬಜೆಟ್‌ನಲ್ಲಿ ರಾಷ್ಟ್ರೀಯ ಭಾಷಾ ಅನುವಾದ ಮಿಷನ್ ಆರಂಭಿಸಲು ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Advertisement
Advertisement
ಆಡಳಿತಕ್ಕೆ ಸಂಬಂಧಿಸಿದ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ವಿವಿಧ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಈ ಮಿಷನ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸೀತಾರಾಮನ್ ತಿಳಿಸಿದರು.
Advertisement
ಪ್ರಸ್ತುತ ಕೇಂದ್ರ ಸರ್ಕಾರದ ದಾಖಲೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುತ್ತದೆ. ಹಿಂದಿ ಭಾಷೆಯಲ್ಲಿ ಯಾಕೆ ದಾಖಲೆಗಳನ್ನು, ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗುತ್ತದೆ. ದಕ್ಷಿಣ ಭಾರತದ ಭಾಷೆಗಳಲ್ಲಿ ದಾಖಲೆಗಳು ಯಾಕೆ ಪ್ರಕಟವಾಗುವುದಿಲ್ಲ ಎಂದು ಜನ ಪ್ರಶ್ನಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನವೇ ನಡೆದಿತ್ತು. ಈಗ ಸರ್ಕಾರ ಈ ಟೀಕೆಗೆ ಉತ್ತರ ಎಂಬಂತೆ ರಾಷ್ಟ್ರೀಯ ಭಾಷಾ ಅನುವಾದ ಮಿಷನ್ ಆರಂಭಿಸಲು ಮುಂದಾಗಿದೆ.
Advertisement