ಬೆಂಗಳೂರು: ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಟಿ, ವಕೀಲೆ ಹಾಗೂ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಕೌಂಟರ್ ನೀಡಿದ್ದಾರೆ.
Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‍ಗೆ ರಿಟ್ವೀಟ್ ಮಾಡಿರುವ ಮಾಳವಿಕಾ, ತಮ್ಮ ಪಕ್ಷದ ಶಾಸಕರ ಮನೆಯ ಹುಡುಗ, ತಮ್ಮ ಪಕ್ಷದ ಬಿಬಿಎಂಪಿ ಟಿಕೆಟ್ ಆಕಾಂಕ್ಷಿಗೆ ತಾವೇ ಬುದ್ಧಿ ಹೇಳಬಹುದಲ್ಲವೇ ಸರ್? ಎಂದಿದ್ದಾರೆ.
Advertisement
ತಮ್ಮ ಪಕ್ಷದ ಶಾಸಕರ ಮನೆಯ ಹುಡುಗ, ತಮ್ಮ ಪಕ್ಷದ ಬಿಬಿಎಂಪಿ ಟಿಕೆಟ್ ಆಕಾಂಕ್ಷಿಗೆ ತಾವೆ ಬುದ್ದಿ ಹೇಳಬಹುದಲ್ಲವೇ ಸರ್? https://t.co/ZdM4dGg3Ig
— Malavika Avinash (@MalavikaBJP) August 12, 2020
Advertisement
ಸಿದ್ದರಾಮಯ್ಯ ಟ್ವೀಟ್‍ನಲ್ಲೇನಿದೆ?
ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ?, ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದರು.
Advertisement
ಕಾವಲಭೈರಸಂದ್ರದಲ್ಲಿ
ಗಲಭೆ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ.
ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು.#Kavalbyrasandra
— Siddaramaiah (@siddaramaiah) August 12, 2020
ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‍ಗೆ ತಿಳಿಸಿದ್ದೇನೆ ಎಂದಿದ್ದರು.