ಹಿರಿಯ ನಟಿ ಡಾ. ಲೀಲಾವತಿ ಆರೋಗ್ಯದಲ್ಲಿ ಚೇತರಿಕೆ

Public TV
2 Min Read
Leelavathi

ನೆಲಮಂಗಲ: ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ. ಲೀಲಾವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಕನ್ನಡ ಚಿತ್ರೋದ್ಯಮದ ಹಿರಿಯ ಜೀವ 60 – 70 ರ ದಶಕದಲ್ಲಿ ಕನ್ನಡ ಸಿಮಾದ ಬೆಳ್ಳಿತೆರೆಯಲ್ಲಿ ಮಿಂಚಿದ ತಾರೆ ಡಾ.ಲೀಲಾವತಿ. ನೆನ್ನೆ ತಮ್ಮ ತೋಟದ ಮನೆಯ ಸ್ನಾನದ ಗೃಹದಲ್ಲಿ ಜಾರಿಬಿದ್ದು ಪೆಟ್ಟು ಮಾಡಿಕೊಂಡಿದ್ದರು. 83 ವಯಸ್ಸಿನ ಹಿರಿಯ ಜೀವ ಪೆಟ್ಟಿನಿಂದ ಇಂದು ಸ್ವಲ್ಪ ಚೇತರಿಕೆ ಪಡೆದಿದ್ದಾರೆ. ಸ್ಯಾಂಡಲ್‍ವುಡ್ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಭೇಟಿಯಾಗಿರುವ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

Leelavathi2

ಲೀಲಾವತಿ ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು, ಜೀವನದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ. ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ. ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ. ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ ಎಂದು ಬರೆದಿದ್ದಾರೆ.

ಇಂತಹ ವ್ಯಕ್ತಿತ್ವ ಹೊಂದಿರುವ ಲೀಲಾವತಿ ಅಮ್ಮನವರ ಜೊತೆ ಬಾಲನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು, ನಾಯಕಿಯಾದ ಮೇಲು ಲೀಲಾವತಿ ಅಮ್ಮನವರ ಜೊತೆ ಸುಮಾರು ಸಿನಿಮಾಗಳಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿರುವ ಎರಡು ಫೋಟೋಗಳಲ್ಲಿ ಮೊದಲನೆಯದು ನಾನು ಬಾಲನಟಿಯಾಗಿ ನಟಿಸಿದ ಮೊದಲ ಸಿನಿಮಾ “ಕಿಲಾಡಿ ಕಿಟ್ಟು” ಚಿತ್ರೀಕರಣದ ಸಮಯದ ಫೋಟೋ ಮತ್ತೊಂದು ಇಂದು ಲೀಲಾವತಿ ಅಮ್ಮನವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋ. ವರ್ಷಗಳು ಉರುಳಿವೆ ಹೊರತು ನಮ್ಮ ನಡುವೆ ಇರುವ ಬಾಂಧವ್ಯವಲ್ಲ ಎಂದು ಬರೆದುಕೊಂಡು ಕೆಲವು ಫೋಟೋವನ್ನು ಹಂಚಿಕೊಂಡಿದ್ದಾರೆ.

LEELAVATHI

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಮಗ ನಟ ವಿನೋದ್ ರಾಜ್ ಜೊತೆ ವಾಸವಿರುವ ಲೀಲಾವತಿ ಅವರನ್ನ ಇಂದು, ನೆಲಮಂಗಲ ಆರ್.ಟಿ.ಓ ಹಿರಿಯ ಅಧಿಕಾರಿ ಡಾ.ಧನ್ವಂತರಿ ಎಸ್ ಒಡೆಯರ್ ಹಾಗೂ ಸಿಬ್ಬಂದಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ನೆನ್ನೆ ನೆಲಮಂಗಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿ ಸಲ್ಪ ಸಮಯದ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದರು. ಹೀಗಾಗಿ ಅಭಿಮಾನಿಯಾಗಿರುವ ನೆಲಮಂಗಲ ಆರ್ ಟಿ ಓ ಅಧಿಕಾರಿ ಒಡೆಯರ್ ಲೀಲಾವತಿ ಅವರ ಆರೋಗ್ಯದಿಂದ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

leelavathi1

Share This Article
Leave a Comment

Leave a Reply

Your email address will not be published. Required fields are marked *