ಬೆಂಗಳೂರು: ಹಿರಿಯ ನಿರ್ದೇಶಕ ತಿಪಟೂರು ರಘು (83) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರು ಉಸಿರಾಟದ ಸಮಸ್ಯೆಯಿಂದಾಗಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕರಾಗಿರುವ ಇವರು ಇವರು 1984 ರಲ್ಲಿ ತೆರೆಕಂಡ ವಿಷ್ಣುವರ್ಧನ್ ಮತ್ತು ಶಂಕರನಾಗ್ ಅಭಿನಯದ ‘ಬೆಂಕಿ ಬಿರುಗಾಳಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೆ ನಾಗಕಾಳಭೈರವ, ಬೆಟ್ಟದ ಹುಲಿವೀಣೆ ಸೇರಿದಂತೆ ಅನೇಕ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.
ನಿರ್ದೇಶನದ ಜೊತೆಗೆ ಹಲವು ಚಿತ್ರಗಳಲ್ಲಿ ಕೂಡ ಬಣ್ಣ ಹಚ್ಚುವ ಮೂಲಕ ಮನೆ ಮಾತಾಗಿದ್ದರು.