ಚೆನ್ನೈ: ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಕುರಿತು ಐಪಿಎಲ್ ಫ್ರ್ಯಾಂಚೈಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ)ಯ ಡಾ.ಮಧು ತೊಟ್ಟಪ್ಪಿಲಿಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಒಂದು ಕಡೆ ದೇಶ ಹುತಾತ್ಮರಿಗೆ ಗೌರವ ಸಲ್ಲಿಸುತ್ತಿದೆ. ಇದೇ ಸಮಯದಲ್ಲಿ ಡಾ.ಮಧು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿದ್ದಾರೆ. “ಶವಪೆಟ್ಟಿಗೆಯಲ್ಲಿ ಪ್ರಧಾನಿ ಕೇರ್ಸ್ ಸ್ಟಿಕ್ಕರ್‌ಗಳು ಇವೆಯೇ ಎಂದು ತಿಳಿಯಲು ನನಗೆ ಕುತೂಹಲವಿದೆ” ಎಂದು ಡಾ.ಮಧು ತೊಟ್ಟಪ್ಪಿಲಿಲ್ ಬರೆದುಕೊಂಡಿದ್ದಾರೆ. ಈ ಹಿನ್ನೆಲೆ ಸಿಎಸ್‍ಕೆ ತಕ್ಷಣಕ್ಕೆ ಜಾರಿಗೆ ಬರುವಂತೆ ತಂಡದಿಂದ ಅವರನ್ನು ಅಮಾನತುಗೊಳಿಸಿದೆ.
Advertisement
Advertisement
ಸಿಎಸ್‍ಕೆ ವಿಷಾದ:
ಡಾ.ಮಧು ತೊಟ್ಟಪಿಲಿಲ್ ಟ್ವೀಟ್‍ನಿಂದಾಗಿ ನೆಟ್ಟಿಗರು ಅಸಮಾಧಾನ ಹೊರಹಾಕಿದು. ಹೀಗಾಗಿ ತಕ್ಷಣವೇ ಸಿಎಸ್‍ಕೆ ಕ್ರಮ ಕೈಗೊಂಡು ವೈದ್ಯರನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್, “ಡಾ.ಮಧು ಅವರ ವೈಯಕ್ತಿಕ ಟ್ವೀಟ್ ವಿಚಾರ ನಮಗೆ ತಿಳಿದಿರಲಿಲ್ಲ. ಅವರನ್ನು ತಂಡದ ವೈದ್ಯರ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಮ್ಯಾನೇಜ್ಮೆಂಟ್‍ಗೆ ಹೇಳದೆ ಅವರು ಮಾಡಿದ ಟ್ವೀಟ್‍ಗೆ ಸಿಎಸ್‍ಕೆ ವಿಷಾದಿಸುತ್ತದೆ” ಎಂದು ತಿಳಿಸಿದೆ.
Advertisement
The Chennai Super Kings Management was not aware of the personal tweet of Dr. Madhu Thottappillil. He has been suspended from his position as the Team Doctor.
Chennai Super Kings regrets his tweet which was without the knowledge of the Management and in bad taste.
— Chennai Super Kings (@ChennaiIPL) June 17, 2020
Advertisement
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 2010, 2011 ಮತ್ತು 2018ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಟೂರ್ನಿಯಲ್ಲಿ ಒಟ್ಟು 190 ಪಂದ್ಯಗಳನ್ನು ಆಡಿರುವ ಎಂ.ಎಸ್.ಧೋನಿ 4,432 ರನ್ ಗಳಿಸಿದ್ದಾರೆ.