ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಒಂಟಿಗಾಲಿನ ಅಪರೂಪದ ಮಗುವಿನ ಜನನವಾಗಿದೆ. ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.
ಭಾನುವಾರ ಹೆರಿಗೆ ನೋವಿನಿಂದ ಬಳಲುತಿದ್ದ ಮಹಿಳೆ ಕಿಮ್ಸ್ ಗೆ ದಾಖಲಾಗಿದ್ದರು. ಪ್ರಸವದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಸಿಜೇರಿಯನ್ ಮುಖಾಂತರ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಮಗುವನ್ನು ನೋಡಿದಾಗ ಕೇವಲ ಒಂದು ಕಾಲು ಮಾತ್ರ ಕಾಣಿಸಿಕೊಂಡಿದೆ. ಮಗು ವಿಚಿತ್ರ ಅಂಗಾಂಗ ಹೊಂದಿರುವುದು ವೈದ್ಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ. ಇದನ್ನೂ ಓದಿ: ಬರೋಬ್ಬರಿ 54 ದಿನಗಳ ಬಳಿಕ ಇಂದಿನಿಂದ ಸಾರಿಗೆ ಬಸ್ ಸಂಚಾರ ಆರಂಭ
ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇಲ್ಲವಾಗಿವೆ. ವಿಚಿತ್ರ ಮಗು ಜನಿಸಿದ ನಂತರ ಮಗುವಿನ ಹೆತ್ತವರ ಹೆಸರು ಮತ್ತು ವಿಳಾಸವನ್ನು ವೈದ್ಯರು ಬಹಿರಂಗ ಪಡಿಸದೆ ರಹಸ್ಯವಾಗಿಟ್ಟಿದ್ದಾರೆ.