ಹುಬ್ಬಳ್ಳಿ: ಕೊರೊನಾ ಮಹಾಮಾರಿ ವಾಣಿಜ್ಯ ನಗರಿಯಲ್ಲಿ ಅಟ್ಟಹಾಸ ಮುಂದಿವರಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್‍ಗೆ ಕೋವಿಡ್ ದೃಢಪಟ್ಟಿದೆ.
ಕಳೆದ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಇವರು 52 ವರ್ಷದ ವ್ಯಕ್ತಿಯಾಗಿದ್ದು, ಹುಬ್ಬಳ್ಳಿಯ ಸಿಬಿಟಿ ನಿವಾಸಿಯಾಗಿದ್ದಾರೆ.
ಎರಡು ದಿನದ ಹಿಂದಷ್ಟೇ(ಬಿಜೆಪಿ) ಪಾಲಿಕೆಯ ಮಾಜಿ ಸದಸ್ಯರೊಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಇಬ್ಬರಿಗೂ ಕಿಮ್ಸ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರು ಕೆಲವು ಗಣ್ಯರ ಜೊತೆ ಸಂಪರ್ಕ ಹೊಂದಿದಲ್ಲದೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಇದೀಗ ಎಲ್ಲರಲ್ಲೂ ಆತಂಕ ಶುರುವಾಗಿದೆ.