-ಮ’ರಣ’ಕೇಕೆ ಜೊತೆ ಮಹಾಮಾರಿಯ ಅಟ್ಟಹಾಸ
ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯ ರೌದ್ರ ನರ್ತನ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 9 ಸಾವಿರ ಸನಿಹದಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. ಇಂದು ರಾಜ್ಯದಲ್ಲಿ 8,818 ಮಂದಿಗೆ ಕೊರೊನಾ ತಗುಲಿದೆ.
ಇಂದು ಸಹ ಕೊರೊನಾದಿಂದ 114 ಸೋಂಕಿತರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಮರಣ ಪ್ರಮಾಣ ಶೇ.1.74ರಷ್ಟಿದೆ. ಇಂದು 6,629 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 82,958 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.60.53ರಷ್ಟಿದೆ. ಇದುವರೆಗೂ 19,93,760 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಇಂದು 54,806 ಮಂದಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ರಾಜಧಾನಿಯಲ್ಲಿ ಇಂದು ಕೊರೊನಾ ಮೂರು ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ. ಇಂದು ಬೆಂಗಳೂರಿನಲ್ಲಿ 3,495 ಮಂದಿಗೆ ಕೊರೊನಾಗೆ ತುತ್ತಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 2.034 ಮಂದಿ ಡಿಸ್ಚಾರ್ಜ್ ಆಗಿದ್ದು, 34,860 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಕೊರೊನಾ ಮಾಹಾಮಾರಿ 35 ಜನರನ್ನು ಬಲಿ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಚೇತರಿಕೆ ಪ್ರಮಾಣ ಶೇ.58.56 ಮತ್ತು ಮರಣ ಪ್ರಮಾಣ ಶೇ.1.59 ರಷ್ಟಿದೆ.