ಮುಲ್ತಾನ್: ಉತ್ತರ ಪಾಕಿಸ್ತಾನದಲ್ಲಿ ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಸ್ಟೋರ್ ಜಿಲ್ಲೇಯ ಉತ್ತರ ಮಿನಿಮಾರ್ಗ್ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಪೈಲಟ್ ಮತ್ತು ಸಹಪೈಲಟ್ ಹಾಗೂ ಇನ್ನಿಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪರಿಹಾರ ಕಾರ್ಯಾಚರಣೆಯಲ್ಲಿದ್ದ ಪಾಕಿಸ್ತಾನದ ಸೇನಾ ಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದ ಸೈನಿಕಕರೊಬ್ಬರ ಮೃತ ದೇಹವನ್ನು ಹೊತ್ತು ತರುತ್ತಿದ್ದ ಹೆಲಿಕಾಪ್ಟರ್ ಶನಿವಾರ ಸಂಜೆ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ ಎಂದು ಸೇನೆ ತಿಳಿಸಿದೆ.