ನವದೆಹಲಿ: ಗಾಜಿಯಾಬಾದ್ ಪತ್ರಕರ್ತನ ಕೊಲೆ ಖಂಡಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಮ ರಾಜ್ಯ ತರುತ್ತೇವೆಯೆಂದು ಮಾತು ನೀಡಿ, ರಾಜ್ಯ(ಉತ್ತರ ಪ್ರದೇಶ)ದಲ್ಲಿ ಗೂಂಡಾ ರಾಜ್ಯ ಜಾರಿಗೆ ತರಲಾಗಿದೆ ಎಂದು ಸಿಎಂ ಯೋಗಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್: ಸಂಬಂಧಿ ಯುವತಿಗೆ ಕಿರುಕುಳ ನೀಡಿದ್ದನ್ನು ಖಂಡಿಸಿದ್ದಕ್ಕೆ ಪತ್ರಕರ್ತ ವಿಕ್ರಮ್ ಜೋಶಿ ಅವರನ್ನು ಹತ್ಯೆ ಮಾಡಲಾಗಿದೆ. ದುಃಖವನ್ನು ತಡೆದುಕೊಳ್ಳುವ ಶಕ್ತಿ ವಿಕ್ರಮ್ ಕುಟುಂಬದವರಿಗೆ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
अपनी भांजी के साथ छेड़छाड़ का विरोध करने पर पत्रकार विक्रम जोशी की हत्या कर दी गयी। शोकग्रस्त परिवार को मेरी सांत्वना।
वादा था राम राज का, दे दिया गुंडाराज।
— Rahul Gandhi (@RahulGandhi) July 22, 2020
ವಿಕ್ರಮ್ ಜೋಶಿ ಸಂಬಂಧಿ ಯುವತಿಗೆ ಕಿರುಕುಳ ನೀಡಿದ್ದವರ ವಿರುದ್ಧ ಜುಲೈ 16 ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೋಮವಾರ ರಾತ್ರಿ ಸುಮಾರು 10.30ಕ್ಕೆ ಅಪರಿಚಿತರು ವಿಕ್ರಮ್ ಜೋಶಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಜೋಶಿ ನಿಧನರಾಗಿದ್ದಾರೆ.
ಜೋಶಿ ಗಾಜಿಯಾಬಾದ್ ನ ದಿನ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯಲೋಪದಡಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.