ಬೆಂಗಳೂರು: ಸಿಡಿ ಪ್ರಕರಣ ಕ್ಷಣದಿಂದ ಕ್ಷಣಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಸದ್ಯ ಯುವತಿ ರಕ್ಷಣೆ ಕೋರಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ಯುವತಿ ಬರೆದಿರುವ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‍ಐಟಿ ತನಿಖೆ ನಡೆಯಬೇಕು ಎಂದು ಬರೆದಿರುವ ಪತ್ರವನ್ನ ಭಾನುವಾರವೇ ಮೇಲ್ ಮೂಲಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ರವಾನಿಸಲಾಗಿದೆ.
Advertisement
Advertisement
ಇಂದು ಸಂತ್ರಸ್ತ ಯುವತಿ ವಿಚಾರಣೆ ಹಾಜರೋಗುದು ಬಹುತೇಕ ಫಿಕ್ಸ್ ಎನ್ನಲಾಗಿದೆ. ನ್ಯಾಯಧೀಶರ ಸಮಯ ನೋಡಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 20ಕ್ಕೂ ಹೆಚ್ಚು ಹಿರಿಯ ವಕೀಲರ ಟೀಂ ಸಿದ್ಧತೆ ಮಾಡಿಕೊಂಡಿದೆ. ಸಂತ್ರಸ್ತ ಯುವತಿಗೆ ಆತ್ಮಸ್ಥೈರ್ಯ ತುಂಬಲು ಈ ವಕೀಲರ ತಂಡ ತಯಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಕಬ್ಬನ್ ಪಾರ್ಕ್ ಕ್ರೈಂ ಪೊಲೀಸರು ನೋಟಿಸ್ ನೀಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.