ಬೆಳಗಾವಿ: ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ, ಹೈಕಮಾಂಡ್ ಟಿಕೆಟ್ ನೀಡಿದರೆ ನಮ್ಮ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಶ್ರದ್ಧಾ ಶೆಟ್ಟರ್ ಹೇಳಿದ್ದಾರೆ.
Advertisement
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಲೋಕಭಾ ಉಪಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧರಿದ್ದೇವೆ. ಕೋರ್ ಕಮಿಟಿ ಸಭೆಯಲ್ಲೂ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಬೇರೆ ಅಭ್ಯರ್ಥಿಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಹೈಕಮಾಂಡ್ ನಿರ್ಧಾರವೇ ಅಂತಿಮ. ಚುನಾವಣೆಗೆ ಸ್ಪರ್ಧಿಸಬೇಕೆಂದು ಅಭಿಮಾನಿಗಳ ಒತ್ತಾಯ ಇದ್ದು, ಹೈಕಮಾಂಡ್‍ಗೂ ಇದನ್ನು ತಿಳಿಸಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದರು.
Advertisement
Advertisement
ಇನ್ನೆರಡು ದಿನಗಳಲ್ಲಿ ಈ ಬಗ್ಗೆ ತಿಳಿಯಲಿದೆ. ನಾನು ದೆಹಲಿಗೆ ಹೋಗಿರಲಿಲ್ಲ, ಬೆಂಗಳೂರಿನಲ್ಲಿದ್ದೆ. ಹೈಕಮಾಂಡ್ ಅಥವಾ ಪಕ್ಷದ ವರಿಷ್ಠರು ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ. ಕುಟುಂಬಕ್ಕೆ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದೇವೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ. ನಮ್ಮ ತಂದೆ ಜನರ ಜೊತೆ ಒಳ್ಳೆಯ ಸಂಪರ್ಕ ಹೊಂದಿದ್ದರು. ಅಭಿಮಾನಿಗಳು ಕರೆದ ಸಮಾರಂಭಗಳಿಗೆ ಹೋಗುತ್ತಿದ್ದೇನೆ. ಮುಂದೆಯೂ ಅಭಿಮಾನಿಗಳ ಜೊತೆ ಸಂಪರ್ಕ ಬೆಳೆಸಿಕೊಂಡು ಹೋಗುತ್ತೇವೆ. ತಂದೆಯವರ ಜೊತೆಗಿದ್ದ ಎಲ್ಲರ ಜೊತೆಗೂ ನಾವು ಇರುತ್ತೇವೆ ಎಂದರು.