– ವೈದ್ಯರಿಂದ ಆಸ್ಪತ್ರೆ ಮುಂದೆ ಪ್ರತಿಭಟನೆ
ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಹೊಟ್ಟೆ ನೋವಿನಿಂದ ದಾಖಲಾಗಿದ್ದ ರೋಗಿಯೊಬ್ಬ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದರು. ಬಳಿಕ ರೋಗಿಯ ಕಡೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದರು. ಇಂದು ರೋಗಿಯ ಕಡೆಯವರು ಹಲ್ಲೆ ಮಾಡಿರುವುದನ್ನು ಖಂಡಿಸಿ ಆಸ್ಪತ್ರೆಯ ತರಬೇತಿ ವೈದ್ಯರು ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಿದ್ದಾರೆ.
Advertisement
ರಿಮ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಹಿನ್ನೆಲೆ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ತರಬೇತಿ ವೈದ್ಯರ ಮೇಲೆ ರೋಗಿ ಸಂಬಂಧಿಕರು ಹಲ್ಲೆ ಮಾಡಿದ್ದರು. ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ರೋಗಿಗೆ ಚಿಕಿತ್ಸೆ ನೀಡುವಾಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ.
Advertisement
Advertisement
ಹಲ್ಲೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡುತ್ತಿದ್ದ ವೈದ್ಯರನ್ನು ಸಮಾಧಾನ ಪಡಿಸಲು ಬಂದ ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಜೊತೆ ವೈದ್ಯರು ವಾಗ್ವಾದ ನಡೆಸಿ, ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೈದ್ಯರಿಗೆ ಕೋವಿಡ್ ಕರ್ತವ್ಯ ನೆಪ – ಚಿಕಿತ್ಸೆ ಸಿಗದೆ ವಂಚಿತರಾಗುತ್ತಿರೋ ರೋಗಿಗಳು
Advertisement
ತರಬೇತಿ ವೈದ್ಯರ ಒತ್ತಾಯಕ್ಕೆ ಮಣಿದ ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಬಸವರಾಜ್ ಪೀರಾಪುರ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ದೂರು ನೀಡಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ವೈದ್ಯರು ತಾತ್ಕಾಲಿಕವಾಗಿ ಹೋರಾಟ ಹಿಂಪಡೆದಿದ್ದಾರೆ.