ಬೆಂಗಳೂರು: ಹೊರಗಡೆಯಿಂದ ಯಾರೇ ನಮ್ಮ ತಾಲೂಕಿಗೆ ಬಂದರೂ ಕೊರೊನಾ ಟೆಸ್ಟ್ ವರದಿ ನೀಡಬೇಕು ಎಂದು ತಹಶೀಲ್ದಾರ್ ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಹೊರಗಡೆಯಿಂದ ಯಾರೇ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿಗೆ ಬಂದರೆ ಕೂಡಲೇ ಅವರ ಗಂಟಲು ದ್ರವವನ್ನು ಪರೀಕ್ಷೆ ಮಾಡಿ ವರದಿ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಹೊರಗಡೆಯಿಂದ ಯಾರೇ ಹಿರೇಕೆರೂರು ಮತ್ತು ರಟ್ಟೆಯಲ್ಲಿ ತಾಲೂಕಿಗೆ ಬಂದರೆ ಕೂಡಲೇ ಅವರ ಗಂಟಲು ದ್ರವವನ್ನು ಪರೀಕ್ಷೆ ಮಾಡಿ ವರದಿ ಮಾಡಬೇಕು ತಹಸೀಲ್ದಾರ್ರವರಿಗೆ ಸೂಚನೆ ನೀಡಿದ್ದೇನೆ
— Kourava B.C.Patil (@bcpatilkourava) July 14, 2020
Advertisement
ಇತ್ತ ಮಹಾಮಾರಿ ಕೊರೊನಾದಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್‍ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಅವರು ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.
Advertisement
ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ.
— Kourava B.C.Patil (@bcpatilkourava) July 12, 2020
Advertisement
ಬಿ.ಸಿ.ಪಾಟೀಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, “ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿ ಇದ್ದ ನಾನು ಮತ್ತು ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ” ಎಂದು ಜನರಿಗೆ ಸೋಮವಾರ ತಿಳಿಸಿದ್ದರು.