ಬಾಲಿವುಡ್ ನ ಬಹುಬೇಡಿಕೆಯ ನಟರಲ್ಲಿ ವಿಕ್ಕಿ ಕೌಶಲ್ ಕೂಡ ಒಬ್ಬರು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟ ಇದೀಗ ತನ್ನ ಹೊಸ ಗೆಳೆಯನನ್ನು ಪರಿಚಯಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
ಹೌದು. ಉರಿ ಖ್ಯಾತಿಯ ನಿರ್ದೇಶಕ ಆದಿತ್ಯಧರ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಬ್ಯುಸಿಯಾಗಿರುವ ವಿಕ್ಕಿ ಕೌಶಲ್, ಈ ಚಿತ್ರಕ್ಕಾಗಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಈ ಹಿಂದೆ ತಾವು ಜಿಮ್ ನಲ್ಲಿ ಬೆವರಿಳಿಸುತ್ತಿರುವ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಇದೀಗ ನಟನಿಗೆ ಹೊಸ ಗೆಳೆಯನೊಬ್ಬ ಸಿಕ್ಕಿದ್ದಾನೆ.
View this post on Instagram
ಅಂದಹಾಗೆ ವಿಕ್ಕಿ ಹೊಸ ಗೆಳೆಯ ಮತ್ಯಾರು ಅಲ್ಲ ದುಬಾರಿ ರೇಂಜ್ ರೋವರ್. ವಿಕ್ಕಿ ಹೊಸ ಕಾರನ್ನು ಖರೀದಿಸಿದ್ದು, ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ವಿಕ್ಕಿ ಹೊಸ ಪೋಸ್ಟ್ ಗೆ ಅಭಿಮಾನಿಗಳ ಜೊತೆಗೆ ಬಾಲಿವುಡ್ ನ ಅನೇಕ ಸೆಲೆಬ್ರಿಟಿಗಳು ಸಹ ಖುಷಿಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.
ಇತ್ತ ಉರಿ ನಿರ್ದೇಶಕ ಆದಿತ್ಯ ಧರ್ ಕಾಮೆಂಟ್ ಮಾಡಿ, ಶಾಟ್ ಗನ್! ಅಭಿನಂದನೆಗಳು ನನ್ನ ಸಹೋದರ. ಕಷ್ಟಪಟ್ಟು ಕೆಲಸ ಮಾಡಿ ಉತ್ತಮ ಸಕ್ಸಸ್ ಸಾಧಿಸಿದ್ದೀರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: “ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು”